ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರದಲ್ಲಿ ಕಾಖಂಡಕಿಯ ಶಿವಯೋಗೀಶ್ವರ ಶ್ರೀ ಅಭಿಮತ
ಉದಯರಶ್ಮಿ ದಿನಪತ್ರಿಕೆ
ಧಾರವಾಡ: ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾಗಿರುವ ಸಂಗಮೇಶ ಬಬಲೇಶ್ವರ ಅವರು, ನಾಡಿನ ಮಕ್ಕಳ ಅಭ್ಯುದಯಕ್ಕಾಗಿ ದಣಿವರಿಯದ ಸೇವೆಯಲ್ಲಿ ತೊಡಗಿರುವುದು ಮಕ್ಕಳ ಮೇಲೆ ಅವರಿಗಿರುವ ಕಾಳಜಿ ಮತ್ತು ಬದ್ಧತೆಯನ್ನು ತೋರಿಸುತ್ತದೆ ಎಂದು ವಿಜಯಪುರ ಜಿಲ್ಲೆಯ ಕಾಖಂಡಕಿಯ ಗುರುದೇವಾಶ್ರಮದ ಶಿವಯೋಗೀಶ್ವರ ಸ್ವಾಮೀಜಿ ಶ್ಲಾಘಿಸಿದರು.
ಗುರುವಾರ ನಗರದ ಹೊರವಲಯದ ’ನೇಚರ್ ಫಸ್ಟ್ ಇಕೋ ವಿಲೇಜ್’ ನಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮಿ ಆಯೋಜಿಸಿರುವ ರಾಜ್ಯಮಟ್ಟದ ವಸತಿಯುತ ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರದಲ್ಲಿ ಅವರು ಮಕ್ಕಳಿಗೆ ಮಾರ್ಗದರ್ಶನ ನೀಡಿ ಅವರು ಮಾತನಾಡಿದರು.
ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಮಾತನಾಡಿ, ಅಕಾಡೆಮಿಯು ಸದಾ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಿದೆ. ನಮ್ಮ ಎಲ್ಲ ಪ್ರಯತ್ನಗಳಿಗೆ ಬೆಂಗಾವಲಾಗಿ ನಿಂತಿರುವ ಸಿಎಂ ಸಿದ್ದರಾಮಯ್ಯ, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ, ಎಂ.ಬಿ.ಪಾಟೀಲ, ಸಂತೋಷ ಲಾಡ ರಿಗೆ ನಾನು ಋಣಿಯಾಗಿದ್ದೇನೆ ಎಂದು ಹೇಳಿದರು.
ಕನಸಿನ ಕಟ್ಟೆಯ ಮೇಲೆ ನಡೆದ ಮಕ್ಕಳೊಂದಿಗಿನ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರೇಮಲ್ಲೂರು ಈಶ್ವರನ್ ಮಹಾವಿದ್ಯಾಲಯದ ಪ್ರಾಚಾರ್ಯರಾದ ಶಶಿಧರ ತೋಡಕರ ವಹಿಸಿದ್ದರು.
ಕುರಹಟ್ಟಿ ಗುರುಗಳು, ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಮಕ್ಕಳು, ಶಿಕ್ಷಕರು, ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು.

