ಉದಯರಶ್ಮಿ ದಿನಪತ್ರಿಕೆ
ಇಂಡಿ: ಪಟ್ಟಣದ ಸರಕಾರಿ ನೌಕರರ ಸಭಾಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ೭೨ ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಜಿಲ್ಲೆಯಲ್ಲಿ ಅತೀ ಹೆಚ್ಚು ಸಹಕಾರ ಶಿಕ್ಷಣ ನಿಧಿ ಸಂದಾಯ ಮಾಡಿದ ಗುಡ್ಡದ ಬಸವರಾಜೇಂದ್ರ ಸೌಹಾರ್ದ ಸಹಕಾರಿ ಸಂಘಕ್ಕೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿದ್ಯಾಶ್ರೀ ಪಾಟೀಲ್ ಅವರಿಗೆ ಸಹಕಾರ ಇಲಾಖೆಯ ಅಧಿಕಾರಿ ಭಾಗ್ಯಶ್ರೀ ಕುಂಬಾರ ಪ್ರಶಸ್ತಿ ವಿತರಿಸಿದರು.
ಸಹಕಾರಿ ಧುರೀಣರಾದ ಎಂ.ಆರ್. ಪಾಟೀಲ, ಶ್ರೀಮಂತ ಇಂಡಿ, ಎಂ.ಸಿ. ಮುಲ್ಲಾ, ಗುರುಶಾಂತ ನಿಡೋಣಿ ಸೇರಿದಂತೆ ಇನ್ನಿತರರು ಇದ್ದರು.

