ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯ ಇಂಡಿ ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ೬೭ ಅಂಗನವಾಡಿ ಕಾರ್ಯಕರ್ತೆ ಹಾಗೂ ೧೬೪ ಅಂಗನವಾಡಿ ಸಹಾಯಕಿಯರ ಆಯ್ಕೆಯಾಗಿ ಅರ್ಜಿ ಆಹ್ವಾನಿಸಿ ತಾತ್ಕಾಲಿಕ ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿತ್ತು. ಸದರಿ ಹುದ್ದೆಗಳಿಗೆ ಅಂತಿಮವಾಗಿ ಆಯ್ಕೆಯಾದ ೫೮ ಅಂಗನವಾಡಿ ಕಾರ್ಯಕರ್ತೆ ಹಾಗೂ ೧೫೯ ಅಂಗನವಾಡಿ ಸಹಾಯಕಿಯರ ಅಂತಿಮ ಆಯ್ಕೆ ಪಟ್ಟಿಯನ್ನು ಯೋಜನಾ ಕಚೇರಿಯ ನಾಮಫಲಕದಲ್ಲಿ ಪ್ರಕಟಿಸಲಾಗಿದೆ.
ಅದರಂತೆ ೦೪ ಅಂಗನವಾಡಿ ಕಾರ್ಯಕರ್ತೆ ಹಾಗೂ ೦೧ ಅಂಗನವಾಡಿ ಸಹಾಯಕಿ ಹುದ್ದೆಗೆ ತಾತ್ಕಾಲಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಸಹ ಯೋಜನಾ ಕಚೇರಿಯ ನಾಮಫಲಕದಲ್ಲಿ ಪ್ರಕಟಿಸಲಾಗಿದ್ದು, ತಾತ್ಕಾಲಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳ ಆಯ್ಕೆಗೆ ಮಾತ್ರ ದಿನಾಂಕ : ೨೧-೧೧-೨೦೨೫ ರಿಂದ ೨೯-೧೧-೨೦೨೫ರ ವರೆಗೆ ಪೂರಕ ದಾಖಲಾತಿಗಳೊಂದಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ ಎಂದು ಇಂಡಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
