Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಂದು “ತನು ಕನ್ನಡ ಮನ ಕನ್ನಡ” ಪ್ರಶಸ್ತಿ ಪ್ರದಾನ ಸಮಾರಂಭ

ಮಾದಕ ದ್ರವ್ಯಗಳ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿ

ಶ್ರೀಶೈಲಗೌಡ ರ ಮೆದು ನುಡಿಗಳಂತೆ ಅವರ ನಡೆಯೂ ಸಹ ಶುಭ್ರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆರೋಗ್ಯಪೂರ್ಣ ಪರಿಸರಕ್ಕೆ ವಿಜ್ಞಾನ-ತಂತ್ರಜ್ಞಾನ & ಸಹಾನುಭೂತಿ ಅಗತ್ಯ
(ರಾಜ್ಯ ) ಜಿಲ್ಲೆ

ಆರೋಗ್ಯಪೂರ್ಣ ಪರಿಸರಕ್ಕೆ ವಿಜ್ಞಾನ-ತಂತ್ರಜ್ಞಾನ & ಸಹಾನುಭೂತಿ ಅಗತ್ಯ

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

39ನೇ ದಕ್ಷಿಣ ಭಾರತ ಚಿಕ್ಕಮಕ್ಕಳ ತಜ್ಞರ ಸಮ್ಮೇಳನ ಹಾಗೂ ರಾಜ್ಯ 44ನೇ ಚಿಕ್ಕಮಕ್ಕಳ ತಜ್ಞರ ಸಮ್ಮೇಳನ ಉದ್ಗಾಟಿಸಿದ ಸಚಿವ ಎಂ.ಬಿ.ಪಾಟೀಲ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಮಾಜದಲ್ಲಿ ಉತ್ತಮ ಮತ್ತು ಆರೋಗ್ಯಪೂರ್ಣ ಪರಿಸರ ಒದಗಿಸಲು ವಿಜ್ಞಾನ, ತಂತ್ರಜ್ಞಾನ ಮತ್ತು ಸಹಾನುಭೂತಿ ಒಗ್ಗೂಡಿ ಸಾಗಬೇಕು ಎಂದು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.
ಶನಿವಾರ ನಗರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಶಿಶುರೋಗ ವಿಭಾಗ, ಭಾರತೀಯ ಚಿಕ್ಕಮಕ್ಕಳ ತಜ್ಞರ ಸಂಘ, ಕರ್ನಾಟಕ ಚಿಕ್ಕಮಕ್ಕಳ ತಜ್ಞರ ತಂಡ ಹಾಗೂ ಡಾ. ಬಿದರಿಯವರ ಅಶ್ವಿನಿ ಇನಸ್ಟಿಟ್ಯೂಟ್ ಆಫ್ ಚೈಲ್ಡ್ ಹೆಲ್ತ್ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ 39ನೇ ದಕ್ಷಿಣ ಭಾರತ ಚಿಕ್ಕಮಕ್ಕಳ ತಜ್ಞರ ಸಮ್ಮೇಳನ ಹಾಗೂ ಕರ್ನಾಟಕ ರಾಜ್ಯ 44ನೇ ಚಿಕ್ಕಮಕ್ಕಳ ತಜ್ಞರ ಸಮ್ಮೇಳನ ಉದ್ಗಾಟಿಸಿ ಅವರು ಮಾತನಾಡಿದರು.
ಪ್ರತಿ ಮಗುವಿಗೆ ಜ್ಞಾನ, ನಾವೀನ್ಯತೆ ಮತ್ತು ಆರೈಕೆ ಈ ಬಾರಿಯ ಸಮ್ಮೇಳನದ ಘೋಷವಾಕ್ಯವಾಗಿದೆ. ಇಲ್ಲಿ ಚರ್ಚಿಸುವ ವಿಚಾರಗಳು ಮತ್ತು ಕೈಗೊಳ್ಳುವ ನಿರ್ಣಯಗಳು ಮಕ್ಕಳ ಆರೋಗ್ಯಪೂರ್ಣ ಭವಿಷ್ಯಕ್ಕೆ ಅಗತ್ಯವಾಗಿರಲು ಕ್ರಮಗಳನ್ನು ಕೈಗೊಳ್ಳಲು ಸಹಾಯವಾಗಲಿವೆ. ಪ್ರತಿಯೊಂದು ಮಗುವನ್ನು ಆರೋಗ್ಯವಾಗಿ ಬೆಳೆದು ಉತ್ತಮವಾಗಿ ಕಲಿತು, ತನ್ನ ಕನಸನ್ನು ನನಸು ಮಾಡಲು ಮತ್ತು ಈ ಮೂಲಕ ಭವ್ವ ಭಾರತಕ್ಕೆ ಕೊಡುಗೆ ನೀಡಲು ಪೂರಕವಾಗಲಿವೆ ಎಂಬ ವಿಶ್ವಾಸವಿದೆ ಎಂದು ಅವರು ಹೇಳಿದರು.
ಪ್ರತಿಯೊಂದು ಮಗುವಿನ ಹಿನ್ನೆಲೆ ಅಥವಾ ಭೌಗೋಳಿಕತೆಯನ್ನು ಲೆಕ್ಕಿಸದೆ, ಸಕಾಲಿಕ, ಗುಣಮಟ್ಟದ ಹಾಗೂ ಸಮಾನ ಆರೈಕೆಯನ್ನು ಒದಗಿಸುವುದು ಇಂದು ತುರ್ತಾಗಿ ಆಗಬೇಕಿದೆ. ನೀತಿ ನಿರೂಪಕರು, ಶಿಕ್ಷಕರು, ವೈದ್ಯರು ಮತ್ತು ಸಂಶೋಧಕು ಮಕ್ಕಳನ್ನು ಬದುಕಿಸುವುದು ಮಾತ್ರವಲ್ಲದೇ, ಈ ನಿಟ್ಟಿನಲ್ಲಿ ರೂಪಿಸಬೇಕಿರುವ ಯೋಜನೆಗಳ ಬಗ್ಗೆ ಸಾಮೂಹಿಕವಾಗಿ ಜವಾಬ್ದಾರಿ ವಹಿಸಬೇಕಿದೆ. ಇಂಥ ಸಮ್ಮೇಳನಗಳನ್ನು ಆಯೋಜಿಸುವ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ಮಕ್ಕಳಹಿತ ಕಾಪಾಡುವ ಮನಸ್ಸುಗಳನ್ನು ಒಟ್ಟುಗೂಡಿಸಲು ಸಾಧ್ಯವಾಗುತ್ತದೆ. ಹೊಸ ಆಲೋಚನೆಗಳು, ಸಹಯೋಗದ ಸಂಶೋಧನೆ ಮತ್ತು ಸುಧಾರಿತ ಚಿಕಿತ್ಸೆ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ನಿರ್ಣಾಯಕ ಪಾತ್ರ ವಹಿಸುತ್ತವೆ. ಮಕ್ಕಳ ಹಿರಿಯ ತಜ್ಞವೈದ್ಯರು, ಸಂಘದ ಪದಾಧಿಕಾರಿಗಳು, ಉದಯೋನ್ಮುಖ ಯುವ ವೃತ್ತಿಪರ ವೈದ್ಯರು ಇಲ್ಲಿ ಸೇರುವ ಮೂಲಕ ಎಲ್ಲರೂ ಒಗ್ಗೂಡಿ ಶಿಶು ಮರಣ ಪ್ರಮಾಣವನ್ನು ಕಡಿಮೆ ಮಾಡಲು, ಚಿಕ್ಕಮಕ್ಕಳ ಕಾಯಿಲೆಗಳನ್ನು ನಿಭಾಯಿಸಲು, ಹದಿಹರೆಯದವರ ಮಕ್ಕಳಲ್ಲಿ ಆರೋಗ್ಯವನ್ನು ಬಲಪಡಿಸುವ ಮೂಲಕ ಭವ್ಯ ಭಾರತದ ನಿರ್ಮಾಣಕ್ಕೆ ಕೊಡುಗೆ ನೀಡಲು ಸಾಧ್ಯವಾಗಲಿದೆ ಎಂದು ಅವರು ಹೇಳಿದರು.
ಸಂಘದ ರಾಜ್ಯಾಧ್ಯಕ್ಷ ಡಾ. ಎಸ್. ವಿ. ಪಾಟೀಲ ಮಾತನಾಡಿ, ಜವಾಬ್ದಾರಿ ವಹಿಸಿಕೊಂಡ ನಂತರ ಇಟ್ಟುಕೊಂಡಿದ್ದ ಗುರಿಗಳನ್ನು ಈಡೇರಿಸಿದ್ದೇನೆ. ರಾಜ್ಯದ ಎಲ್ಲ ಜಿಲ್ಲಾ ಘಟಕಗಳನ್ನು ಬಲಪಡಿಸಿದ್ದೇವೆ. ವೃತ್ತಿ ನೈಪುಣ್ಯತೆ ಹೆಚ್ಚಿಸುವುದು ಮತ್ತು ನೀತಿ ಸಂಹಿತೆ ಪಾಲನೆ, ನವಜಾತ ಶಿಶುಗಳ ಆರೋಗ್ಯ ಕಾಪಾಡುವುದು, ಮಕ್ಕಳ ಆರೋಗ್ಯ ಸಂರಕ್ಷಣೆ ಚಟುವಟಿಕೆಗಳಿಗೆ ಕಳೆದ ಒಂದು ವರ್ಷದಲ್ಲಿ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಸಂಘದ ಮುಂದಿನ(ಭಾವಿ) ಅಧ್ಯಕ್ಷ ಡಾ. ರವಿಶಂಕರ ಮಾರ್ಪಳ್ಳಿ ಮಾತನಾಡಿ, ಡಿಜಿಟಲ್ ಸಲಕರಣೆಗಳ ಬಳಕೆಯಿಂದ ಮಕ್ಕಳ ಮೇಲಾಗುತ್ತಿರುವ ಪರಿಣಾಮ, ಪೋಷಕರು ಎದುರಿಸುತ್ತಿರುವ ಆತಂಕಗಳ ಬಗ್ಗೆ ಗಮನ ಹರಿಸಲಾಗುವುದು. ಪಂಚಮಹಾಭೂತಗಳನ್ನು ಸಂರಕ್ಷಿಸುವುದರ ಮೂಲಕ ಪರಿಸರ ಸಂರಕ್ಷಣೆ ಈ ಮೂಲಕ ಮಕ್ಕಳಿಗೆ ಉತ್ತಮ ಆರೋಗ್ಯ ಒದಗಿಸಲು ಹಾಗೂ ತುರ್ತು ಔಷಧಿ ಮತ್ತು ಚಿಕಿತ್ಸೆ(ಎಮರ್ಜೆನ್ಸಿ ಮೆಡಿಸೀನ್) ಕಡೆಗೆ ಹೆಚ್ಚಿನ ಗಮನ ಹರಿಸಲಾಗುವುದು. ಪ್ರತಿ ಎರಡು ತಿಂಗಳಿಗೊಮ್ಮೆ ಆನಲೈನ್ ಮೀಟಿಂಗ್ ನಡೆಸಿ ಮಕ್ಕಳ ಆರೋಗ್ಯ ಚಟುವಟಿಕೆಗಳ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದರು.
ಡಾ. ಯೋಗೇಶ ಪಾರೀಖ ಮಾತನಾಡಿ, ಕರ್ನಾಟಕ ಚಿಕ್ಕಮಕ್ಕಳ ತಜ್ಞರ ಸಂಘ ಅತ್ಯುತ್ತಮವಾಗಿ ಕೆಲಸ ಮಾಡಿದೆ ಎಂದು ಶ್ಲಾಘಿಸಿದರು.
ಇದೇ ವೇಳೆ ಸಚಿವರು ಸಮ್ಮೇಳನದ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಿದರು. ಸಂಘದ ರಾಜ್ಯ ಕಾರ್ಯದರ್ಶಿ ಡಾ. ಸಿದ್ದು ಚರಕಿ ವರದಿ ವಾಚಿಸಿದರು.
ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಪತಿ ಡಾ. ಅರುಣ ಚಂ. ಇನಾಮದಾರ, ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ, ಪ್ರಭಾರ ಪ್ರಾಚಾರ್ಯೆ ಡಾ. ತೇಜಶ್ವಿನಿ ವಲ್ಲಭ, ಚಿಕ್ಕಮಕ್ಕಳ ತಜ್ಞರ ಸಂಘದ ರಾಷ್ಟ್ರ ಮತ್ತು ರಾಜ್ಯ ಘಟಕಗಳ ಪದಾಧಿಕಾರಿಗಳಾದ ಡಾ. ಬಸವರಾಜ ಜಿ. ವಿ., ಡಾ. ಸಂತೋಷ ಸೊನ್ಸ, ಡಾ. ಪ್ರೀತಿ ಗಲಗಲಿ, ಡಾ. ಕೆ. ರಾಜೇಂದ್ರನ, ಡಾ. ಅಭಿಷೇಕ ಫಡಕೆ, ಡಾ. ಎಲ್. ಎಚ್. ಬಿದರಿ, ಮಾಜಿ ಶಾಸಕ ಮತ್ತು ಚಿಕ್ಕಮಕ್ಕಳ ತಜ್ಞ ಡಾ. ಸಾರ್ವಭೌಮ ಬಗಲಿ, ಡಾ. ಆರ್. ಟಿ. ಪಾಟೀಲ, ಡಾ. ಎಂ. ಎಂ. ಪಾಟೀಲ, ಡಾ. ಎಸ್. ಎಸ್. ಕಲ್ಯಾಣಶೆಟ್ಟರ, ಡಾ. ಪರೀಕ್ಷಿತ ಕೋಟಿ, ಡಾ. ಶ್ರೀಶೈಲ ಗಿಡಗಂಟಿ, ಡಾ. ರವಿ ಬರಡೋಲ, ಡಾ. ಎಂ. ವೆಂಕಟಾಚಲಪತಿ, ಡಾ. ಸಿಂಗಾರವೇಲು, ಡಾ. ನಂದೀಶ ಬಿ, ಡಾ. ದುರ್ಗಪ್ಪ, ಡಾ. ವಿಡಿ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.
ಡಾ. ಆರತಿ ಜಯಕುಮಾರ ಪ್ರಾರ್ಥಿಸಿದರು. ಡಾ. ಎಂ. ಎಂ. ಪಾಟೀಲ ಸ್ವಾಗತಿಸಿದರು. ಡಾ. ಎಸ್. ಎಸ್. ಕಲ್ಯಾಣಶೆಟ್ಟರ ವಂದಿಸಿದರು.

“ಕರ್ನಾಟಕ ಕೈಗಾರಿಕೆ ಮತ್ತು ಆರ್ಥಿಕವಾಗಿ ಮುಂದುವರೆದಿದ್ದು, ಹೊಸ ಕೈಗಾರಿಕಾ ನೀತಿ 2025-2030 ಮತ್ತು ಕ್ವಿನ್(KWIN) ಸಿಟಿಯಂಥ ಭವಿಷ್ಯಕ್ಕೆ ಸಿದ್ಧವಾದ ಪರಿಸರ ವ್ಯವಸ್ಥೆಗಳನ್ನು ಒದಗಿಸಲು ಈಗಾಗಲೇ ಕ್ರಮ ಕೈಗೊಂಡಿದೆ. ಇದರಲ್ಲಿ ಮಾನವೀಯ ನೆಲೆಯಲ್ಲಿ ತಾಯಿ ಮತ್ತು ಮಕ್ಕಳ ಆರೋಗ್ಯ ಅಭಿವೃದ್ಧಿಯೂ ಸೇರಿದೆ. ಉತ್ತಮ ಆರೋಗ್ಯಕ್ಕೆ ಕೈಜೋಡಿಸಲು ನಾವು ಬದ್ಧರಾಗಿದ್ದೇವೆ. ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಡೀಮ್ಡ್ ವಿಶ್ವವಿದ್ಯಾಲಯ ಶೈಕ್ಷಣಿಕ ಶ್ರೇಷ್ಠತೆ, ಕೌಶಲ್ಯ ಅಭಿವೃದ್ಧಿ ಮತ್ತು ಆರೋಗ್ಯ ರಕ್ಷಣೆಯಲ್ಲಿ ನಾವೀನ್ಯತೆ ಒದಗಿಸಲು ಸಕಲ ರೀತಿಯಲ್ಲಿ ತೊಡಗಿಸಿಕೊಂಡಿದೆ.”

– ಡಾ. ಎಂ.ಬಿ.ಪಾಟೀಲ
ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಂದು “ತನು ಕನ್ನಡ ಮನ ಕನ್ನಡ” ಪ್ರಶಸ್ತಿ ಪ್ರದಾನ ಸಮಾರಂಭ

ಮಾದಕ ದ್ರವ್ಯಗಳ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿ

ಶ್ರೀಶೈಲಗೌಡ ರ ಮೆದು ನುಡಿಗಳಂತೆ ಅವರ ನಡೆಯೂ ಸಹ ಶುಭ್ರ

ಮಕ್ಕಳ ಸೃಜನಶೀಲ ವ್ಯಕ್ತಿತ್ವ ರೂಪಿಸುವಲ್ಲಿ ಅಕಾಡೆಮಿ ಪಾತ್ರ ಅನನ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಂದು “ತನು ಕನ್ನಡ ಮನ ಕನ್ನಡ” ಪ್ರಶಸ್ತಿ ಪ್ರದಾನ ಸಮಾರಂಭ
    In (ರಾಜ್ಯ ) ಜಿಲ್ಲೆ
  • ಮಾದಕ ದ್ರವ್ಯಗಳ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲಗೌಡ ರ ಮೆದು ನುಡಿಗಳಂತೆ ಅವರ ನಡೆಯೂ ಸಹ ಶುಭ್ರ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಸೃಜನಶೀಲ ವ್ಯಕ್ತಿತ್ವ ರೂಪಿಸುವಲ್ಲಿ ಅಕಾಡೆಮಿ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಣ ಕಾರ್ಯಾಚರಣೆ
    In (ರಾಜ್ಯ ) ಜಿಲ್ಲೆ
  • ಸೋಮದೇವರಹಟ್ಟಿ ದುರ್ಗಾದೇವಿ ಮಂದಿರ ದೇಶದ ಪ್ರಮುಖ ದೇಗುಲ
    In (ರಾಜ್ಯ ) ಜಿಲ್ಲೆ
  • ಆರೋಗ್ಯಪೂರ್ಣ ಪರಿಸರಕ್ಕೆ ವಿಜ್ಞಾನ-ತಂತ್ರಜ್ಞಾನ & ಸಹಾನುಭೂತಿ ಅಗತ್ಯ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಪ್ರೌಢಾವಸ್ಥೆಯಲ್ಲಿ ಬೆಳವಣಿಗೆ
    In ವಿಶೇಷ ಲೇಖನ
  • ವಿಜಯಪುರ ಜಿಲ್ಲೆಗೆ ರಾಷ್ಟ್ರೀಯ ಪುರಸ್ಕಾರ :ಸಚಿವ ಎಂ.ಬಿ.ಪಾಟೀಲ ಸಂತಸ
    In (ರಾಜ್ಯ ) ಜಿಲ್ಲೆ
  • ಕೆಂಭಾವಿ: ತಿಮ್ಮಕ್ಕನ ಸ್ಮರಣಾರ್ಥ ಸಸಿ ನೆಟ್ಟು ನಮನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.