ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾ ಪೊಲೀಸ್ ವತಿಯಿಂದ ನವೆಂಬರ್ ೨೮ರಿಂದ ೩೦ರವರೆಗೆ ನಗರದ ಸೋಲಾಪುರ ರಸ್ತೆಯ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ.
ನ.೨೮ರಂದು ಬೆಳಿಗ್ಗೆ ೮ ಗಂಟೆಗೆ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಜರುಗಲಿದ್ದು, ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ ಅವರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಭಾಗವಹಿಸಲಿದ್ದಾರೆ.
ನ.೩೦ರಂದು ಸಂಜೆ ೪ ಗಂಟೆಗೆ ನಡೆಯುವ ಮುಕ್ತಾಯ ಸಮಾರಂಭದಲ್ಲಿ ಬೆಳಗಾವಿ ಉತ್ತರ ವಲಯದ ಆರಕ್ಷಕ ಮಹಾನಿರೀಕ್ಷಕರಾದ ಚೇತನಸಿಂಗ್ ರಾಥೋರ ಅವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
