ಕೆಪಿಸಿಸಿ ಪ್ರಚಾರ ಸಮಿತಿಯ ತಿಕೋಟಾ ಮತ್ತು ಬಬಲೇಶ್ವರ ತಾಲೂಕು ಘಟಕಗಳ ನೂತನ ಪದಾಧಿಕಾರಿಗಳಿಗೆ ನೇಮಕ ಪತ್ರ ವಿತರಿಸಿದ ಎಂಎಲ್ಸಿ ಸುನೀಲಗೌಡ ಪಾಟೀಲ ಕರೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸರಕಾರದ ಯೋಜನೆಗಳು ಮತ್ತು ಸಾಧನೆಗಳ ಕುರಿತು ಜನರ ಜಾಗೃತಿ ಮೂಡಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಬೇಕು ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಮಂಗಳವಾರ ನಗರದಲ್ಲಿರುವ ಶಾಸಕರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ಬಬಲೇಶ್ವರ ಮತಕ್ಷೇತ್ರದ ತಿಕೋಟಾ ಮತ್ತು ಬಬಲೇಶ್ವರ ತಾಲೂಕು ಘಟಕಗಳ ನೂತನ ಪದಾಧಿಕಾರಿಗಳಿಗೆ ನೇಮಕ ಪತ್ರ ವಿತರಿಸಿ ಅವರು ಮಾತನಾಡಿದರು.
ಪ್ರಚಾರ ಸಮಿತಿಯ ಪದಾಧಿಕಾರಿಗಳು ಸಿಎಂ ಸಿದ್ಧರಾಮಯ್ಯ, ಕೆ.ಪಿ.ಸಿ.ಸಿ ಅಧ್ಯಕ್ಷ ಮತ್ತು ಡಿಸಿಎಂ ಡಿ. ಕೆ. ಶಿವಕುಮಾರ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ ಸೊರಕೆ, ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಮಾರ್ಗದರ್ಶನದಲ್ಲಿ ಬೇರು ಮಟ್ಟದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು. ಸರಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಮತ್ತು ಇತರ ಅಭಿವೃದ್ಧಿ ಕಾರ್ಯಗಳ ಕುರಿತು ಹೆಚ್ಚೆಚ್ಚು ಪ್ರಚಾರ ಮಾಡಿ ಪಕ್ಷವನ್ನು ಬಲಪಡಿಸುವ ಕೆಲಸ ಮಾಡಬೇಕು ಎಂದು ಸುನೀಲಗೌಡ ಪಾಟೀಲ ಅವರು ಕರೆ ನೀಡಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ವಿಜಯಪುರ ಜಿಲ್ಲಾಧ್ಯಕ್ಷ ಸರಫರಾಜ ಮಹ್ಮದ ಹುಸೇನ ಮಿರ್ದೆ, ಜಿಲ್ಲಾ ಖಜಾಂಚಿ ಸುಂದರಪಾಲ ರಾಠೋಡ, ತಿಕೋಟಾ ತಾಲೂಕು ಅಧ್ಯಕ್ಷ ಅಬ್ಬಾಸ್ ಎಸ್. ಪಿಂಜಾರ, ಬಬಲೇಶ್ವರ ಅಧ್ಯಕ್ಷ ಗೈಬುಸಾಬ ಜಾಗೀರದಾರ, ಜಿಲ್ಲಾ ಸಂಯೋಜಕ ಅಕ್ಬರ ಗೋಕಾವಿ, ತಿಕೋಟಾ ಮತ್ತು ಬಬಲೇಶ್ವರ ಪದಾಧಿಕಾರಿಗಳಾದ ಸಿದ್ದಪ್ಪ ಅ. ಚಡಚಣ, ದಾವಲಮಲಿಕ ಬ. ಹಳ್ಳಿ, ಪರಶುರಾಮ ಸವದಿ, ಅನೀಲ ನಾಟಿಕಾರ, ನ್ಯಾಮು ಬಂಡೆಗಾರ, ವಿಜಯಕುಮಾರ ತಂಗಡಿ, ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ನೇಮಕ ಪತ್ರ ವಿತರಿಸಿದರು. ಗುರಗೊಂಡ ಬಿರಾದಾರ, ಮುಬಾರಕ ಲಾಟೀಯಾರ, ಇಬ್ರಾಹಿಂ ಕೊರ್ತಿ, ದಸ್ತಗೀರಸಾಬ ಮುಳವಾಡ, ಚಾಂದಸಾಬ ಟಕ್ಕಳಕಿ, ಮಲಕಾರಿ ಒಡೆಯರ ಮುಂತಾದವರು ಉಪಸ್ಥಿತರಿದ್ದರು.

