ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೫-೨೬ನೇ ಸಾಲಿನ ಸರ್ಕಾರಿ ನರ್ಸಿಂಗ್ ಕಾಲೇಜುಗಳಲ್ಲಿ ಬಿಎಸ್ಸಿ ನರ್ಸಿಂಗ್ ಕೋರ್ಸ್ನ ಖಾಲಿ ಉಳಿದಿರುವ ಸೀಟುಗಳಿಗೆ ಸಮಿತಿ ಮೂಲಕ ಮೇರಿಟ್ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವಂತೆ ನಿರ್ದೇಶನದ ಹಿನ್ನಲೆಯಲ್ಲಿ ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ನವೆಂಬರ್ ೨೮ರ ಬೆಳಿಗ್ಗೆ ೯ ರಿಂದ ಸಂಜೆ ೫ರವರೆಗೆ ಪ್ರಕ್ರಿಯೆ ನಡೆಯಲಿದ್ದು, ಆಸಕ್ತರು ಭಾಗವಹಿಸಬಹುದಾಗಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
