ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಹಾನಗರ ಪಾಲಿಕೆಯ ಆಯ-ವ್ಯಯ(ಬಜೆಟ್) ಸಾರ್ವಜನಿಕರ ಪೂರ್ವಭಾವಿ ಸಭೆಯನ್ನು ೨೮-೧೧-೨೦೨೫ರಂದು ಬೆಳಿಗ್ಗೆ ೧೧ ಗಂಟೆಗೆ ಮಹಾನಗರ ಪಾಲಿಕೆಯ ಮುಖ್ಯ ಕಚೇರಿಯಲ್ಲಿ ಆಯೋಜಿಸಲಾಗಿದೆ.
ಮಹಾನಗರ ಪಾಲಿಕೆಯ ಪೂರ್ವಭಾವಿ ಸಭೆಯಲ್ಲಿ ಸಾರ್ವಜನಿಕರು, ಕಲ್ಯಾಣ ಸಂಸ್ಥೆಯ ಪದಾಧಿಕಾರಿಗಳು, ವ್ಯಾಪಾರ ಮತ್ತು ಕೈಗಾರಿಕೆ ಸಂಸ್ಥೆ ಒಕ್ಕೂಟಗಳ ಸದಸ್ಯರು ಮತ್ತು ಇತರೆ ಸಂಘ-ಸಂಸ್ಥೆಯ ಮುಖ್ಯಸ್ಥರು ಭಾಗವಹಿಸಿ ಸೂಕ್ತ ಸಲಹೆ-ಸೂಚನೆ ನೀಡುವಂತೆ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ.

