ಸಂವಿಧಾನ ದಿನಾಚರಣೆ | ಮೆರವಣಿಗೆಗೆ ಚಾಲನೆ | ಸಿಂದಗಿ ಶಾಸಕ ಅಶೋಕ ಮನಗೂಳಿ ಕರೆ
ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಅಂಬೇಡ್ಕರ್ ಎಂದರೆ ಶಕ್ತಿ, ಬೆಳಕು, ಧೈರ್ಯ, ಜ್ಞಾನ, ಶ್ರೇಷ್ಠ, ಸಮಾನತೆ ಪ್ರತಿಯೊಬ್ಬರೂ ಅವರ ತತ್ವ ಸಿದ್ಧಾಂತಗಳನ್ನು ಪಾಲಿಸಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಸಿಂದಗಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಸಂವಿಧಾನ ದಿನಾಚರಣೆ ನಿಮಿತ್ಯ ತಾಲೂಕು ಆಡಳಿತ ಹಮ್ಮಿಕೊಂಡ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಅವರು, ವಿಶ್ವಕ್ಕೆ ಅತ್ಯಂತ ಶ್ರೇಷ್ಠ ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿದ್ದಾರೆ. ಎಲ್ಲರಿಗೂ ಸಮಾನತೆ ಮುಖ್ಯ ಎಂದು ಸಂದೇಶ ಸಾರಿ ಅಸಮಾನತೆ ವಿರುದ್ಧ ಹೋರಾಡಿದ ಮಹಾನ್ ನಾಯಕ ಡಾ.ಬಿ.ಆರ್.ಅಂಬೇಡ್ಕರ್ ಎಂದರು.
ಈ ವೇಳೆ ಪುರಸಭೆ ಮಾಜಿ ಸದಸ್ಯ ರಾಜಶೇಖರ ಕೂಚಬಾಳ ಮಾತನಾಡಿ, ಸಂವಿಧಾನ ವಿಶ್ವದ ಎಲ್ಲ ಸಂವಿಧಾನಕ್ಕಿಂತ ಶ್ರೇಷ್ಠ. ಯಾವುದೇ ಜಾತಿ ಧರ್ಮಕ್ಕೆ ಮೀಸಲಾದ ಗ್ರಂಥ ಇದಲ್ಲ. ಇದೊಂದು ರಾಷ್ಟ್ರೀಯ ಗ್ರಂಥ. ಕಾರಣ ಸಂವಿಧಾನ ಸಮರ್ಪಣಾ ದಿನವನ್ನು ಸಂವಿಧಾನ ದಿನವನ್ನಾಗಿ ಆಚರಣೆ ಮಾಡುವಂತೆ ಘೋಷಣೆ ಮಾಡಿದ ಸರಕಾರಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದರು.
ಈ ವೇಳೆ ತಹಶೀಲ್ದಾರ ಕೆ.ಎಸ್.ಬೆಳ್ಳಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಭವಾನಿ ಪಾಟೀಲ, ತಾಪಂ ಇಒ ರಾಮು ಅಗ್ನಿ, ಪಿಎಸ್‌ಐ ಆರೀಫ್ ಮುಷಾಪುರಿ, ಮಲ್ಲಣ್ಣ ಸಾಲಿ, ಅಶೋಕ ಅಲ್ಲಾಪುರ, ಸಿದ್ದಪ್ಪ ಕಾರಿಮುಂಗಿ, ಪೀರೂ ಕೆರೂರ, ಕಸಾಪ ತಾಲೂಕಾಧ್ಯಕ್ಷ ವಾಯ್.ಸಿ.ಮಯೂರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಇದ್ದರು.

