ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಕಲಚೇತನರ ಜಿಲ್ಲಾ ಮಟ್ಟದ ಕುಂದು ಕೊರತೆ ಸಭೆಯನ್ನು ಜಿಲ್ಲಾಧಿಕಾರಿ ಅವರ ಅರ್ದಯಕ್ಷತೆಯಲ್ಲಿ ನವೆಂಬರ್ ೨೮ರ ಬೆಳಿಗ್ಗೆ ೧೧ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು ಹಾಗೂ ವಿಕಲಚೇತನರು ಸಭೆಗೆ ಹಾಜನಾಗುವಂತೆ ಕೋರಲಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕನಕದಾಸ ಬಡಾವಣೆ ಜಿಲ್ಲಾ ಪಂಚಾಯತಿ ಆವರಣ ವಿಜಯಪುರ ೦೮೩೫೨-೭೯೬೦೬೦ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
