ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ನಡೆದ ಸಂವಿಧಾನ ದಿನಾಚರಣೆಯಲ್ಲಿ ಡಾ.ತರನ್ನುಮ್ ಜಬೀನ್ ಖಾನ್ ಅಭಿಮತ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ ಸಿ ಪಿ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ, ರಾಜ್ಯಶಾಸ್ತ್ರ ವಿಭಾಗದ ಸಹಯೋಗದಲ್ಲಿ ನ.೨೬ ರಂದು ರಾಷ್ಟ್ರೀಯ ಸಂವಿಧಾನ ದಿನಾಚರಣೆಯ ಆಚರಿಸಲಾಯಿತು.
ಈ ವೇಳೆಯಲ್ಲಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ತರನ್ನುಮ್ ಜಬೀನ್ ಖಾನ್ ಪ್ರಾಸ್ತಾವಿಕ ಮಾತನಾಡಿ, ನಮ್ಮ ಸಂವಿಧಾನವು ಪ್ರಜಾಸತ್ತಾತ್ಮಕ ಮೌಲ್ಯಗಳಾದ ಸಮಾನತೆ, ಸ್ವಾತಂತ್ರ, ನ್ಯಾಯ ಹಾಗೂ ಕರ್ತವ್ಯಗಳು ಎಂಬ ಜವಾಬ್ದಾರಿಗಳನ್ನು ನೀಡಿದೆ ಎಂದರು.
ಸಂವಿಧಾನದ ಹುಟ್ಟು, ಬೆಳವಣಿಗೆ, ಸಂವಿದಾನದ ಈ ದಿನದ ಮಹತ್ವ, ನಮ್ಮ ಭಾರತದ ಸಂವಿಧಾನದ ಮುಲಭೂತ ಹಕ್ಕು ಮತ್ತು ಕರ್ತವ್ಯಗಳು ಹಾಗೂ ಸಂವಿಧಾನದ ಮಹತ್ವ ತಿಳಿಸಿದರು.
ಈ ವೇಳೆಯಲ್ಲಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯೆ ಡಾ. ಆರ್.ಎಮ್.ಮಿರ್ಧೆ, ಐಕ್ಯೂಎಸಿ ಸಂಯೋಜಕ ಡಾ. ಪಿ.ಎಸ್. ಪಾಟೀಲ ಸೇರಿದಂತೆ ಇನ್ನಿತರ ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

