ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ರಾಜ್ಯ ಬ್ರಾಹ್ಮಣ ಸಮುದಾಯದ ಪ್ರತಿಭಾವಂತ ಪದವೀಧರರಿಗೆ ನಾಗರಿಕ ಸೇವೆಗಳಾದ ಐ.ಎ.ಎಸ್ ಅಥವಾ ಕೆ.ಎ.ಎಸ್ ಸ್ಪಧಾತ್ಮಕ ಪರೀಕ್ಷೆಗಳನ್ನು ಬರೆದಯಲು ಉತ್ತೇಜನ ನೀಡುವ ಸಲುವಾಗಿ ಚಾಣಕ್ಯ ಆಡಳಿತ ತರಬೇತಿ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ.
ಐ.ಎ.ಎಸ್ ಅಥವಾ ಕೆ.ಎ.ಎಸ್. ಸ್ಪಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ತರಬೇತಿ ಪಡೆಯುವ ಸಂಬAಧ ೨೦೨೫-೨೬ನೇ ಸಾಲಿನಲ್ಲಿ ಪ್ರವೇಶಾತಿ ಪಡೆದು, ಪಾವತಿಸಲಾದ ತರಬೇತಿ ಶುಲ್ಕದ ಮೊತ್ತದಲ್ಲಿ ಗರಿಷ್ಠ ರೂ.೧ ಲಕ್ಷ ಗಳಿಗೆ ಮಿತಿಗೊಳಿಸಿ ಡಿಬಿಟಿ ಮೂಲಕ ನೇರವಾಗಿ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಮಾಡಲಾಗುವುದು
ಆಸಕ್ತರು ಡಿಸೆಂಬರ್ ೧೫, ೨೦೨೫ ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: ೦೮೦೨೯೬೦೫೮೮೮, ೮೭೬೨೨೪೯೨೩೦ ಗೆ ಅಥವಾ ವೆಬ್ ಸೈಟ್ ksbdb.karnataka.gov.inಗೆ ಭೇಟಿ ನೀಡಬಹುದು ಎಂದು ಜಿಲ್ಲೆಯ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
