ವಿಜಯಪುರ: ರೇಷ್ಮೆ ಇಲಾಖೆ ವತಿಯಿಂದ ೨೦೨೨-೨೩ನೇ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿಗಾಗಿ ಜಿಲ್ಲೆಯ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ರೇಷ್ಮೆ ಬೆಳೆಗಾರರು ಕನಿಷ್ಠ ೧ ಎಕರೆ ಹಿಪ್ಪುನೇರಳೆ ತೋಟ ಹಾಗೂ ಪ್ರತ್ಯೇಕ ಹುಳು ಸಾಕಾಣಿಕಾ ಮನೆ ಹೊಂದಿರಬೇಕು. ೧೦೦ ಮೊಟ್ಟೆಗೆ ಸರಾಸರಿ ರೇಷ್ಮೆ ಗೂಡಿನ ಇಳುವರಿ ೬೫ ಕೆ.ಜಿ. ಹಾಗೂ ಒಂದು ಎಕರೆಗೆ ರೇಷ್ಮೆ ಗೂಡಿನ ಉತ್ಪಾದನೆ ೫೦೦ ಕೆ.ಜಿ.ಗಿಂತ ಕಡಿಮೆ ಇರಬಾರದು.ರೇಷ್ಮೆ ಪಾಸ್ ಬುಕ್, ರೇಷ್ಮೆ ಮೊಟ್ಟೆ/ಚಾಕಿ ಖರೀದಿಸಿರುವ ಬಗ್ಗೆ ಹಾಗೂ ರೇಷ್ಮೆ ಗೂಡು ಮಾರಾಟ ಮಾಡಿರುವ ಬಗ್ಗೆ ದಾಖಲಾತಿಗಳನ್ನು ಹೊಂದಿರಬೇಕು.
ಆಸಕ್ತ ಅರ್ಹ ರೇಷ್ಮೆ ಬೆಳೆಗಾರರು ಸ್ಥಳೀಯ ರೇಷ್ಮೆ ವಿಸ್ತರಣಾಧಿಕಾರಿಗಳು ಅಥವಾ ತಾಲೂಕಾ ರೇಷ್ಮೆ ಪ್ರಬಾರಾಧಿಕಾರಿಗಳಿಂದ ಅರ್ಜಿ ಪಡೆದು, ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ದಿನಾಂಕ : ೨೫-೧೦-೨೦೨೩ರೊಳಗೆ ಅರ್ಜಿ ಸಲ್ಲಿಸುವಂತೆ ರೇಷ್ಮೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment