ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಶ್ರೀ ಪುಟ್ಟರಾಜ ಗವಾಯಿ ಟ್ರಾಮಾಕೇರ್ ನಲ್ಲಿ ತಜ್ಞ ವೈದ್ಯರು, ಹಿರಿಯ ವೈದ್ಯಾಧಿಕಾರಿ, ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಹಾಗೂ ಅರೇ ವೈದ್ಯಕೀಯ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇರೆಗೆ ಷರತ್ತು ಹಾಗೂ ನಿಬಂಧನೆಗೊಳಪಟ್ಟು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ.
ಜನರಲ್ ಸರ್ಜರಿ ತಜ್ಞ, ಮೂಳೆ ಮತ್ತು ಕೀಲು ಶಸ್ತ್ರಚಿಕಿತ್ಸಕ ತಜ್ಞ, ಅನಸ್ತೇಸಿಯಾ ತಜ್ಞ, ರೇಡಿಯಾಲಜಿ ತಜ್ಞ, ನ್ಯೂರೊ ಸರ್ಜರಿ ತಜ್ಞ ಹಾಗೂ ಹಿರಿಯ ವೈದ್ಯಾಧಿಕಾರಿ ಹುದ್ದೆಯ ಸಂದರ್ಶನಕ್ಕೆ ಡಿಸೆಂಬರ್ ೧೦ರ ಬೆಳಿಗ್ಗೆ ೯ ರಿಂದ ಸಂಜೆ ೪:೩೦ರವರೆಗೆ ಕಚೇರಿ ಸಮಯದಲ್ಲಿ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.
ಅದರಂತೆ,ನರ್ಸಿಂಗ್ ಆಫೀಸರ್ ಹಾಗೂ ಫಿಜಿಯೋಥೆರಪಿಸ್ಟ್ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಪ್ರಕಟಣೆ ಹೊರಡಿಸಿದ ದಿನಾಂಕದಿಂದ ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾಸ್ಪತ್ರೆಯ ಕಚೇರಿಯಿಂದ ಪಡೆದುಕೊಂಡು ಅಗತ್ಯ ದಾಖಲೆ ಸಹಿತ ಡಿಸೆಂಬರ್ ೧೦ರ ಸಂಜೆ ೪:೩೦ರೊಳಗಾಗಿ ಸಲ್ಲಿಸಬಹುದಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೩೫೨-೨೭೦೦೦೯ ಅಥವಾ ಜಿಲ್ಲಾ ಶಸ್ತ್ರಚಿಕಿತ್ಸಕರ ಕಾರ್ಯಾಲಯ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕರಾದ ಶಿವಾನಂದ ಮಾಸ್ತಿಹೊಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

