ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿದಾರರಿಗೆ ಸಾರ್ವಜನಿಕ ವಿತರಣಾ ಪದ್ದತಿಯಡಿ ಅರ್ಹ ಫಲಾನುಭವಿಗಳಿಗೆ ಎನ್‌ಎಫ್‌ಎಸ್‌ಎ ಮತ್ತು ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ತಲಾ ಸದಸ್ಯರಿಗೆ ೧೦ ಕೆ.ಜಿ ಅಕ್ಕಿ ವಿತರಿಸಲಾಗುತ್ತಿದೆ.
ವಿತರಿಸಿದ ಉಚಿತ ಪಡಿತರ ಆಹಾರ ಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ಸರಕಾರದ ಆದೇಶದನ್ವಯ ಅಂತಹವರ ಪಡಿತರ ಚೀಟಿಯನ್ನು ೬ ತಿಂಗಳ ಅವಧಿಗೆ ಅಮಾನತ್ತು ಮಾಡುವುದರ ಜೊತೆಗೆ ಮುಕ್ತ ಮಾರುಕಟ್ಟೆ ದರದಂತೆ ದಂಡ ವಿಧಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
