ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸ್ವಚ್ಚ, ಸುಂದರ, ಸದೃಢ ವಿಜಯಪುರಕ್ಕಾಗಿ ಡಿಸೆಂಬರ್ 7 ರಂದು ನಗರದಲ್ಲಿ ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್ ನಲ್ಲಿ ಪಾಲ್ಗೋಳ್ಳಲು ಸಾರ್ವಜನಿಕರಿಂದ ಮನವಿ ಬಂದಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 4, 5 ಹಾಗೂ 6 ರಂದು ಮೂರು ದಿನಗಳ ಕಾಲ ಸ್ಥಳದಲ್ಲಿಯೇ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ.
ಮೊದಲು ಬರುವ ಕೇವಲ 1000(ಒಂದು ಸಾವಿರ) ಜನರಿಗೆ ಅವಕಾಶ ಮಾತ್ರ ನೋಂದಣಿಗೆ ಅವಕಾಶ ಒದಗಿಸಲಾಗಿದೆ. ಕ್ರೀಡಾಪಟುಗಳು, ಸಾರ್ವಜನಿಕರು ಹಾಗೂ ಪರಿಸರಾಸಕ್ತರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ.
ಈಗಾಗಲೇ 21 ಕಿ. .ಮೀ ವಿಭಾಗದಲ್ಲಿ 538, 10 ಕಿ. ಮೀ. ವಿಭಾಗದಲ್ಲಿ, 264 ಹಾಗೂ 5 ಕಿ. ಮೀ ಓಟದಲ್ಲಿ 19,331 ಸೇರಿದಂತೆ ಒಟ್ಟು 20 ಸಾವಿರಕ್ಕೂ ಹೆಚ್ಚು ಓಟಗಾರರು ಆನಲೈನ್ ಮೂಲಕ ತಮ್ಮ ಹೆಸರುಗಳನ್ನು ನೋಂದಣಿ ಮಾಡಿಸಿದ್ದಾರೆ ಎಂದು ನೋಂದಣಿ ಸಮಿತಿಯ ಡಾ. ರಾಜು ಯಲಗೊಂಡ, ವೀರೇಂದ್ರ ಗುಚ್ಚಟ್ಟಿ ಹಾಗೂ ವಿನಯ ಕಂಚ್ಯಾಣಿ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

