ಕುಟುಂಬದ ಸದಸ್ಯರಿಗೆ ಸಾ0ತ್ವನ ಹೇಳಿದ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು
ಉದಯರಶ್ಮಿ ದಿನಪತ್ರಿಕೆ
ಮಂಗಳೂರು: ಇತ್ತೀಚಿಗೆ ಅಕಾಲಿಕವಾಗಿ ನಿಧಾನರಾಗಿರುವ ವಿಡಿಯೋ ಜರ್ನಲಿಸ್ಟ್ ನಾಗರಾಜ್ ಅವರ ಬಿಜೈ ಕಾಪಿಕಾಡ್ ನಿವಾಸಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ರಾಜ್ಯ ಸಂಘದಿಂದ ಆರ್ಥಿಕ ನೆರವು ನೀಡುವುದಾಗಿ ತಿಳಿಸಿದರು. ಅಲ್ಲದೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದಲೂ ಆರ್ಥಿಕ ನೆರವು ಕೊಡಿಸುವ ಭರವಸೆ ನೀಡಿದರು.
ಹಿರಿಯ ಪತ್ರಕರ್ತ ಹನೀಫ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ. ಏನ್, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ನಿರ್ದೇಶಕ ಶ್ರೀನಿವಾಸ್ ನಾಯಕ್ ಇಂದಾಜೆ, ಸಂಘದ ನಿಕಟಪೂರ್ವ ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟಾ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಸಂದೀಪ್ ಉಪಸ್ಥಿತರಿದ್ದರು.

