ಉದಯರಶ್ಮಿ ದಿನಪತ್ರಿಕೆ
ದೇವರ ಹಿಪ್ಪರಗಿ: ಸರ್ಕಾರ ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ಘೋಷಣೆ ಮಾಡಿದ್ದು ಸ್ವಾಗತಕರ. ಆದರೆ ಸರ್ಕಾರ ಇನ್ನುವರೆಗೂ ಮೆಕ್ಕೆಜೋಳ ಖರೀದಿ ಕೇಂದ್ರಗಳು ಆರಂಭ ಮಾಡದಿರುವುದು ದುರದೃಷ್ಟಕರ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ) ಬಣದ ತಾಲೂಕು ಅಧ್ಯಕ್ಷ ರಹಿಮನಸಾಬ್ ಕನಕಾಲ ಹೇಳಿದ್ದಾರೆ.
ಈ ಕುರಿತು ಶನಿವಾರ ಪ್ರಕಟಣೆ ಮೂಲಕ ತಿಳಿಸಿದ ಅವರು, ದೇವರ ಹಿಪ್ಪರಗಿ ತಾಲೂಕಿನ ರೈತರು ಹೆಚ್ಚಿನ ಪ್ರಮಾಣದಲ್ಲಿ ಮೆಕ್ಕೆಜೋಳ ಬೆಳೆಯುತ್ತಿದ್ದಾರೆ. ಆದರಿಂದ ರೈತರ ಸಹಾಯಕ್ಕಾಗಿ ಖರೀದಿ ಕೇಂದ್ರಗಳನ್ನು ಸ್ಥಾಪನೆ ಮಾಡಬೇಕೆಂದು ರಹಿಮನಸಾಬ್ ಕನಕಾಲ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

