Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು

ಚಿನ್ನ ಬೇಕಾ? ಬೆಳ್ಳಿ ಬೇಕಾ?

ಪರೀಕ್ಷೆಯ ಒತ್ತಡ ಎದುರಿಸುವುದು ಹೇಗೆ?

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕನ್ಹೇರಿ ಶ್ರೀಗಳ ಜಿಲ್ಲಾ ನಿರ್ಬಂಧ ತೆರವಿಗೆ ಆಗ್ರಹಿಸಿ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಕನ್ಹೇರಿ ಶ್ರೀಗಳ ಜಿಲ್ಲಾ ನಿರ್ಬಂಧ ತೆರವಿಗೆ ಆಗ್ರಹಿಸಿ ಪ್ರತಿಭಟನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣದಲ್ಲಿ ಬಸವಾದಿ ಶರಣರ ಹಿಂದು ವೇದಿಕೆಯ ನೇತೃತ್ವದಲ್ಲಿ ಕನ್ಹೇರಿ ಸಿದ್ದಗಿರಿಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳಿಗೆ ವಿಜಯಪುರ ಹಾಗೂ ಬಾಗಲಕೋಟ ಜಿಲ್ಲಾ ಪ್ರವೇಶ ನಿರ್ಬಂಧವನ್ನು ತೆರವುಗೊಳಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ ಮಾಡುವ ಮೂಲಕ ರಾಜ್ಯಪಾಲರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಶ್ರೀಮಠದ ಸದ್ಭಕ್ತರು, ವಿವಿಧ ಸಂಘಟನೆಗಳ ಮುಖಂಡರು ತಹಸೀಲ್ದಾರ ಮೂಲಕ ಸರ್ಕಾರಕ್ಕೆ ಸಲ್ಲಿಸಿದರು.
ಪಟ್ಟಣದ ಸಿದ್ದರಾಮ ಮಹಾರಾಜರ ಮಠದ ಮುಂಭಾಗ ವಿವಿಧ ಶ್ರೀಗಳು, ವಿವಿಧ ಸಂಘಟನೆಗಳ ಮುಖಂಡರು, ಶ್ರೀಮಠದ ಸದ್ಭಕ್ತರು, ಶ್ರೀಗಳ ಅಭಿಮಾನಿಗಳು ಜಮಾಯಿಸಿದ ನಂತರ ಪ್ರತಿಭಟನೆ ಮೆರವಣಿಗೆ ಗೊಳಸಂಗಿ ಗಲ್ಲಿ, ಅಗಸಿ ಮೂಲಕ ತೆರಳಿ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿ ಪ್ರತಿಭಟನೆ ಸಭೆಯ ನಡೆಸಿದರು.
ಪ್ರತಿಭಟನೆಯಲ್ಲಿ ಕನ್ಹೇರಿಶ್ರೀಗಳ ಭಾವಚಿತ್ರಗಳು ರಾರಾಜಿಸಿದವು. ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ್ದ ಗ್ರೇಡ್-2 ತಹಸೀಲ್ದಾರ ಎಸ್.ಎಚ್.ಅರಕೇರಿ ಮನವಿ ಪತ್ರ ಸ್ವೀಕರಿಸಿದರು.
ಪ್ರತಿಭಟನೆ ಉದ್ದೇಶಿಸಿ ಗಿರೀಶಾನಂದ ಸ್ವಾಮೀಜಿ ಮಾತನಾಡಿ, ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಮ್ಮ ನೈಸರ್ಗಿಕ ಕೃಷಿಯ ಚಟುವಟಿಕೆಗಳ ಮೂಲಕ, ಜನೋಪಯೋಗಿ ಸೇವಾ ಚಟುವಟಿಕೆಗಳ ಮೂಲಕ ಗುರುಕುಲ ಪದ್ಧತಿಯ ಶಿಕ್ಷಣದ ಮೂಲಕ ನಾಡಿನಾದ್ಯಂತ ಹೆಸರುವಾಸಿಯಾಗಿದ್ದಾರೆ. ಸಮಾಜದ ನಿರ್ಮಾಣಕ್ಕೆ ನಿಸ್ವಾರ್ಥವಾಗಿ, ಬಸವತತ್ವಕ್ಕೆ ಪೂರಕವಾಗಿ ಹಗಲು-ರಾತ್ರಿ ದುಡಿಯುತ್ತಿರುವ ಸಂತರೊಬ್ಬರು ದಂಗೆಗೆ ಕಾರಣವಾಗಲಿದ್ದಾರೆ ಎಂಬ ಸರ್ಕಾರದ ಆರೋಪವೇ ನಮ್ಮೆಲ್ಲರನ್ನು ಗಾಬರಿಗೊಳಿಸಿದೆ. ಶ್ರೀಗಳಿಗೆ ಜಿಲ್ಲಾ ಪ್ರವೇಶ ನಿರ್ಬಂಧ ತೆರವು ಗೊಳಿಸುವ ಮೂಲಕ ಸರ್ಕಾರ ತನ್ನ ಗೌರವ ಉಳಿಸಿಕೊಳ್ಳಬೇಕೆಂದರು.
ವಿವೇಕಾನಂದ ಸೇನೆಯ ಜಿಲ್ಲಾಧ್ಯಕ್ಷ ರಾಘವ ಅಣ್ಣಿಗೇರಿ ಮಾತನಾಡಿ, ಸಾವಿರಾರು ಬಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುತ್ತಿರುವ, ನೂರಾರು ಜನರಿಗೆ ಉದ್ಯೋಗ ನೀಡಿರುವ, ಕೃಷಿಯಲ್ಲಿ ಮಾದರಿ ಬೇಸಾಯ ಕೈಂಕರ್ಯ ಮಾಡಿರುವ ಕನ್ಹೇರಿ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳಿಗೆ ವಿಜಯಪುರ ಜಿಲ್ಲೆಗೆ ನಿರ್ಬಂಧ ಹೇರಿರುವುದು ಖಂಡನೀಯವಾಗಿದೆ ಎಂದರು.
ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶೋಕ ಹಾರಿವಾಳ ಮಾತನಾಡಿದರು.
ಪ್ರತಿಭಟನೆಯಲ್ಲಿ ಶಿವಪುತ್ರ ಸ್ವಾಮಿಜಿ, ಅಭಿನವ ಬಸವರಾಜೇಂದ್ರ ಸ್ವಾಮಿಜಿ, ಶಿವಶರಣಾನಂದ ಸ್ವಾಮಿಜಿ, ಅರವಿಂದ ಮಹಾರಾಜ, ಮುಖಂಡರಾದ ಬಸವರಾಜ ಗಚ್ಚಿನವರ, ಬಸವರಾಜ ಶೆಂಡೆ, ದಯಾನಂದ ಸಾರವಾಡ, ಬಸಣ್ಣ ದೇಸಾಯಿ, ಮಣಿಕಂಠ ಕಲ್ಲೂರ, ವಿನೂತ ಕಲ್ಲೂರ, ಎಚ್. ಎಸ್. ಗುರಡ್ಡಿ, ವಿದ್ಯಾ ಪಾಟೀಲ, ಪರಶುರಾಮ ಅಡಗಿಮನಿ, ಸೀತಾರಾಮ ಭಜಂತ್ರಿ, ಬಸನಗೌಡ ಪಾಟೀಲ,ಸಂತೋಷ ನಾಯಕ, ಅಶ್ವಿನಿ ಪಟ್ಟಣಶೆಟ್ಟಿ, ಗುರು ಕುಂಟೋಜಿ, ಮಹೇಶ ಸಾಲವಾಡಗಿ, ತಮ್ಮಣ್ಣ ಬಡಿಗೇರ,ಶಿವರುದ್ರಯ್ಯ ಹಿರೇಮಠ, ಹಣಮಂತ್ರಾಯ ಗುಣಕಿ, ಸಂಗನಗೌಡ ಬಿರಾದಾರ, ನಿಂಗನಗೌಡ ಪಾಟೀಲ, ಬಸಲಿಂಗಪ್ಪ ನಂದಿ, ಯಮನೂರಿ ಮ್ಯಾಗೇರಿ, ಸಂಗನಗೌಡ ಪಾಟೀಲ ಚಂದ್ರಶೇಖರ ಕುಂಟೋಜಿ, ವಿಜಯಕುಮಾರ ಯಂಭತ್ನಾಳ, ಹಣಮಂತ ಟಕ್ಕಳಕಿ, ಮಡುಗೌಡ ಬಾವಿಕಟ್ಟಿ, ರವಿ ವಡ್ಡರ, ರಾಜಶೇಖರ ದಡ್ಡಿ, ಮಾಳು ಇಬ್ರಾಹಿಂಪುರ, ಕರಿಯಪ್ಪ ಬಾಗೇವಾಡಿ, ಸುರೇಶ ಬೇವಿನಗಿಡದ, ರಮೇಶ ಚಿಂಚೋಳಿ, ಕರಿಯಪ್ಪ ಹೊಸಮನಿ, ಕಲ್ಲು ಸೊನ್ನದ, ಬಸಲಿಂಗಪ್ಪ ಮಾದರ, ಭೀಮು ಹುಲ್ಲೂರ, ಮಹಾದೇವಿ ಹಂಗರಗಿ, ಅಶೋಕ ಮಿಣಜಗಿ, ಸದಾನಂದ ಯಳಮೇಲಿ,ವಿಶ್ವ ಹಿಂದು ಪರಿಷತ್ ಭಜರಂಗದಳ, ವಿವೇಕ ಬ್ರಿಗೇಡ್,ಡಿಎಸ್ಎಸ್, ದುರ್ಗಾವಾಹಿನಿ,ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಸಂಘಟನೆಯ ಮುಖಂಡರು, ಮಹಿಳೆಯರು ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು

ಚಿನ್ನ ಬೇಕಾ? ಬೆಳ್ಳಿ ಬೇಕಾ?

ಪರೀಕ್ಷೆಯ ಒತ್ತಡ ಎದುರಿಸುವುದು ಹೇಗೆ?

ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು
    In ವಿಶೇಷ ಲೇಖನ
  • ಚಿನ್ನ ಬೇಕಾ? ಬೆಳ್ಳಿ ಬೇಕಾ?
    In ವಿಶೇಷ ಲೇಖನ
  • ಪರೀಕ್ಷೆಯ ಒತ್ತಡ ಎದುರಿಸುವುದು ಹೇಗೆ?
    In ವಿಶೇಷ ಲೇಖನ
  • ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ
    In (ರಾಜ್ಯ ) ಜಿಲ್ಲೆ
  • ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು
    In (ರಾಜ್ಯ ) ಜಿಲ್ಲೆ
  • ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಜಲಾಶಯ ಭದ್ರತೆ ಪರೀಕ್ಷಿಸಿದ ಕಮಾಂಡೆಂಟ್ 
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.