ಮುದ್ದೇಬಿಹಾಳ: ಪಟ್ಟಣದ ವಾಲ್ಮೀಕಿ ವೃತ್ತದ ಬಳಿ ಇರುವ ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯದಲ್ಲಿ ಅ.೧೧ ರಂದು ಬೆಳಿಗ್ಗೆ ೧೦ಕ್ಕೆ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಹಾಗೂ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕುರಿತು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಇತರೆ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿರುವ ಈ ಕಾರ್ಯಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷೆ ಲಕ್ಷ್ಮಿ ನಿಂಗಪ್ಪ ಗರಗ ಉದ್ಘಾಟಿಸಲಿದ್ದು, ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಸಂಪತ್ತಕುಮಾರ ಬಳೂಲಗಿಡದ ಉಪಸ್ಥಿತರಿರಲಿದ್ದಾರೆ. ಅಧ್ಯಕ್ಷತೆಯನ್ನು ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ ವಹಿಸಲಿದ್ದು ಅತಿಥಿಗಳಾಗಿ ಸರ್ಕಾರಿ ಅಭಿಯೋಜಕ ಬಸವರಾಜ ಆಹೇರಿ, ಅಪರ ಸರ್ಕಾರಿ ವಕೀಲ ಎಂ.ಆರ್.ಪಾಟೀಲ, ತಹಶೀಲ್ದಾರ ಬಲರಾಮ ಕಟ್ಟಿಮನಿ, ತಾ.ಪಂ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ ಯುವರಾಜ ಹನಗಂಡಿ, ರಾಜಶೇಖರ ಮ್ಯಾಗೇರಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಂಜುನಾಥ ಆಗಮಿಸಲಿದ್ದಾರೆ. ಹಿರಿಯ ನಾಗರಿಕರ ದಿನಾಚರಣೆಯ ಕುರಿತು ತಾಲೂಕು ಆರೋಗ್ಯಾಧಿಕಾರಿ ಸತೀಶ ತಿವಾರಿ, ಮಾನಸಿಕ ರೋಗಗಳ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮನೋರೋಗ ತಜ್ಞ ಮಂಜುನಾಥ ಮಸಳಿ ವಿಶೇಶ ಉಪನ್ಯಾಸ ನೀಡಲಿದ್ದಾರೆ.
ಅ.೧೧ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ & ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ
Related Posts
Add A Comment