ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿನ ನಿಡಗುಂದಿಯ ವಾರ್ಡ್ ನಂಬರ್-೦೪ರ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಸವನ ಬಾಗೇವಾಡಿಯ ಇಕ್ಬಾಲ ನಗರ ಕೇಂದ್ರದಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಹುದ್ದೆಗೆ ಸಂಬಂಧಿಸಿದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಬಸವನ ಬಾಗೇವಾಡಿ ಶಿಶು ಅಭಿವೃದ್ಧಿ ಯೋಜನಾ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಈ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ, ದಿನಾಂಕ: ೦೫-೧೨-೨೦೨೫ ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಬಸವನ ಬಾಗೇವಾಡಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
