ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ೨೦೨೫-೨೬ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ನಂತರದ ಕೋರ್ಸ್ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಡಿಸೆಂಬರ್ ೨೦ರ ಒಳಗಾಗಿ ಇಲಾಖೆ ವೆಬ್‌ಸೈಟ್: https://ssp.postmatric.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ಅಥವಾ ಇಲಾಖಾ ಸಹಾಯವಾಣಿ ಸಂಖ್ಯೆ: ೮೦೫೦೭೭೦೦೦೫ ಸಂಖ್ಯೆ ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
