ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಜಯಪುರ ನಗರದ ಜೈ ಕರ್ನಾಟಕ ಕಾಲೋನಿ ನಿವಾಸಿಯಾದ ಅಂದಾಜು ೩೩ ವರ್ಷದ ಜ್ಯೋತಿ ತಂದೆ ಚಂದ್ರಶೇಖರ ಶಿರಸಂಗಿಮಠ ಎಂಬ ಮಹಿಳೆ ಕಾಣೆಯಾಗಿರುವ ಕುರಿತು ಗೋಲಗುಮ್ಮಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾಣೆಯಾದ ಮಹಿಳೆ ಪತ್ತೆಗೆ ಗೋಲಗುಮ್ಮಜ್ ಪೊಲೀಸ್ ಠಾಣಾಮುಖ್ಯಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಕಾಣೆಯಾಗಿರುವ ಮಹಿಳೆಯು ೪.೮ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಬಣ್ಣ, ಗೋಲು ಮುಖ, ಹಿಂದಿ ಮತ್ತು ಕನ್ನಡ ಭಾಷೆ ಬಲ್ಲವಳಾಗಿದ್ದು, ಕಾಣೆಯಾದ ಸಂದರ್ಭದಲ್ಲಿ ಬೂದು ಬಣ್ಣದ ಟಾಫ್, ಕಪ್ಪು ಬಣ್ಣದ ಚೂಡಿದಾರ ಧರಿಸಿದ್ದಳು. ಈ ಚಹರೆಪಟ್ಟಿಯುಳ್ಳ ಮಹಿಳೆ ಪತ್ತೆಯಾದಲ್ಲಿ ಸಾರ್ವಜನಿಕರು ಗೋಲಗುಮ್ಮಜ್ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ: ೦೮೩೫೨-೨೫೦೨೧೪, ೦೮೩೫೨-೨೫೩೧೦೦, ೦೮೩೫೨-೨೫೦೧೫೨, ೦೮೩೧-೨೪೦೫೨೦೧ ಸಂಪರ್ಕಿಸಿ ಮಾಹಿತಿ ನೀಡುವಂತೆ ಗೋಲಗುಮ್ಮಜ್ ಪೊಲೀಸ್ ಠಾಣಾಮುಖ್ಯಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

