ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಶ್ವ ಏಡ್ಸ್ ದಿನದ ಅಂಗವಾಗಿ ನ.೩೦ರಂದು ಸಂಜೆ ೬ ಗಂಟೆಗೆ ನಗರದ ಕೇಂದ್ರ ಬಸ್ ನಿಲ್ದಾಣದಿಂದ ಕೆ.ಸಿ.ಮಾರ್ಕೆಟ್ ಮಾರ್ಗವಾಗಿ ಗಾಂಧಿವೃತ್ತದವರೆಗೆ ದೀಪ ನಡಿಗೆ (ಕ್ಯಾಂಡಲ್ ಮಾರ್ಚ್) ಜಾಥಾ ಹಾಗೂ ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಾಣದ ಮೂಲಕ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಡಿ.೦೧ ರಂದು ವಿಶ್ವ ಏಡ್ಸ್ ದಿನದ ಅಂಗವಾಗಿ ಬೆಳಿಗ್ಗೆ ೮-೩೦ಕ್ಕೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಿಂದ ಡಾ.ಬಿ.ಆರ್.ಅಂಬೇಡ್ಕರ್ ನಗರ (ರಾಣಿ ಬಗೀಚಾ), ಅಪ್ಸರಾ ಚಿತ್ರಮಂದಿರ ಮಾರ್ಗವಾಗಿ ಅಹಲ್ಯಾಬಾಯಿ ಹೋಳಕರ್ ವೃತ್ತದ ಮೂಲಕ ನೀಲಕಂಠೇಶ್ವರ ಮಂಗಲ ಕಾರ್ಯಾಲಯ, ಇಂಡಿ ರಸ್ತೆ ವಿಜಯಪುರ ವರೆಗೆ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಂತರ ನಗರದ ಇಂಡಿ ರಸ್ತೆಯ ನೀಲಕಂಠೇಶ್ವರ ಮಂಗಲ ಕಾರ್ಯಾಲಯದಲ್ಲಿ ವಿಶ್ವ ಏಡ್ಸ್ ದಿನದ ವೇದಿಕೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಾಥಾ ಹಾಗೂ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಘಟಕದ ಜಿಲ್ಲಾ ಕಾರ್ಯಕ್ರಮಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.
