ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸರಕಾರಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಶ್ರೀಶೈಲಯ್ಯ ಮಡಿವಾಳಯ್ಯ ಮಠಪತಿ(84) ಇಂದು ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ.
ನಗರದ ಕೆ.ಎಚ್.ಬಿ ಕಾಲನಿಯಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಅವರು ಸೇವೆ ಸಲ್ಲಿಸಿದ್ದರು.
ವಯೋಸಹಜ ಕಾಯಿಲೆಯಿಂದ ನಿಧನರಾದ ಅವರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಮೊಮ್ಮಕ್ಕಳು, ಮರಿಮೊಮ್ಮಗಳು ಸೇರಿದಂತೆ ಅಪಾರ ಬಂಧು- ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಚಾಲುಕ್ಯ ನಗರದ ರುದ್ರಭೂಮಿಯಲ್ಲಿ ಸಂಜೆ ನಡೆಯಿತು.

