ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಪಟ್ಟಣದ ಕಾಳಿಕಾ ನಗರದ ನಿವಾಸಿ ಶಕುಂತಲಾ ವಿಶ್ವನಾಥ ಗೋಲಾ (೮೪) ರವಿವಾರ ನಿಧನರಾಗಿದ್ದಾರೆ. ಮೃತರು ಪತಿ ಮತ್ತು ಜಿ.ಪಿ.ಪೋರವಾಲ ಮಹಾವಿದ್ಯಾಲಯದ ದೈಹಿಕ ನಿರ್ದೇಶಕ ಡಾ.ರವಿ ಗೋಲಾ ಅವರು ಸೇರಿದಂತೆ ಈರ್ವರು ಸುಪುತ್ರ ಮತ್ತು ಸುಪುತ್ರಿಯರನ್ನು ಅಗಲಿದ್ದಾರೆ.
ರವಿವಾರ ಸಂಜೆ ಸಿಂದಗಿಯ ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ಅವರ ಅಂತ್ಯಕ್ರಿಯೆ ವಿಧಿವತ್ತಾಗಿ ನೆರವೇರಿತು.
ಸಂತಾಪ: ಮೃತರಿಗೆ ಸ್ಥಳೀಯ ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಉತ್ತರಾಧಿಕಾರಿ ವಿಶ್ವಪ್ರಭುದೇವ ಶಿವಾಚಾರ್ಯರು, ಯಂಕಂಚಿ ಶ್ರೀಮಠದ ಅಭಿನವ ರುದ್ರಮುನಿ ಶಿವಾಚಾರ್ಯರು, ಶಾಸಕ ಅಶೋಕ ಮನಗೂಳಿ, ಮಾಜಿ ವಿಪ ಶಾಸಕ ಅರುಣ ಶಹಾಪೂರ, ಅಶೋಕ ವಾರದ, ಇಂದುಶೇಖರ ಮಣೂರ, ಎಂ.ಎಂ.ಹಂಗರಗಿ, ಮುತ್ತು ಮುಂಡೇವಾಡಗಿ ಸೇರಿದಂತೆ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ನಿರ್ದೇಶಕ ಮಂಡಳಿ ಮತ್ತು ವಿವಿಧ ಅಂಗ ಸಂಸ್ಥೆಗಳ ಪ್ರಾಚಾರ್ಯರು, ಬೋಧಕ, ಬೋಧಕೇತರ ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಸಂತಾಪ ಸೂಚಿಸಿದ್ದಾರೆ.

