ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಅಂಚೆ ವಿಭಾಗದ ೨೦೨೫ನೇ ಸಾಲಿನ ೩ನೇ ತ್ರೈಮಾಸಿಕ ಅಂಚೆ ಅದಾಲತ್ ಕಾರ್ಯಕ್ರಮ ಡಿ.೧೫ ರಂದು ಮಧ್ಯಾಹ್ನ ೩ ಗಂಟೆಗೆ ವಿಜಯಪುರ ವಿಭಾಗದ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯ ಬಬಲೇಶ್ವರ, ಬಸವನಬಾಗೇವಾಡಿ, ಚಡಚಣ, ದೇವರಹಿಪ್ಪರಗಿ, ಇಂಡಿ, ಕೊಲ್ಹಾರ, ಮುದ್ದೇಬಿಹಾಳ, ನಿಡಗುಂದಿ, ಸಿಂದಗಿ, ತಾಳಿಕೋಟೆ, ತಿಕೋಟಾ, ಆಲಮೇಲ ಹಾಗೂ ವಿಜಯಪುರ ತಾಲೂಕುಗಳ ವ್ಯಾಪ್ತಿಯ ಅಂಚೆ ಸೇವೆಗಳಿಗೆ ಸಲಹೆ-ಸೂಚನೆ ಹಾಗೂ ದೂರುಗಳನ್ನು ಅಂಚೆ ಅದಾಲತ್‌ನಲ್ಲಿ ವಿಚಾರಣೆಗೆ ಎಂದು ಮೇಲ್ಬರಹ ಬರೆದು ದಿನಾಂಕ : ೧೦-೧೨-೨೦೨೫ರೊಳಗೆ ಯಾವುದೇ ಅಂಚೆ ಕಚೇರಿಯಲ್ಲಿ ಸಲ್ಲಿಸಬಹುದಾಗಿದೆ. ಇಂತಹ ದೂರು ಮತ್ತು ಸಲಹೆಯ ಲಕೋಟೆಗೆ ಯಾವುದೇ ಅಂಚೆ ವೆಚ್ಚ ಭರಿಸುವ ಅಗತ್ಯವಿರುವುದಿಲ್ಲ.
ಅಂಚೆ ಅದಾಲತ್‌ನಲ್ಲಿ ಅಂಚೆ ಇಲಾಖೆಯಿಂದ ಒದಗಿಸಲಾಗುತ್ತಿರುವ ಸೇವೆಗಳಲ್ಲಿ ಇರುವ ಕೊರತೆಗಳನ್ನು ಮತ್ತು ಸುಧಾರಿಸುವ ಸಲಹೆ ಸೂಚನೆಗಳ ಕುರಿತು ಚರ್ಚಿಸಲಾಗುವುದು ಎಂದು ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
