ವಿಜಯಪುರ: ನಗರದ ಅಥಣಿ ರಸ್ತೆಯಲ್ಲಿರುವ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಇದೇ ದಿ.೧೨ ರಂದು ಬೆಳಿಗ್ಗೆ ೧೦ ಕ್ಕೆ ಬೀದಿ ಬದಿ ವ್ಯಾಪರಸ್ಥರಿಗಾಗಿ ಪಿ.ಎಂ. ಸ್ವನಿಧೀ ಯೋಜನೆ ಮಾಹಿತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಮಾಜಿ ಸಚಿವ ಹಾಗೂ ಯೋಜನೆಯ ರಾಜ್ಯ ಸಂಚಾಲಕ ಎಸ್.ಎ. ರಾಮದಾಸ್, ಸಂಸದ ರಮೇಶ ಜಿಗಜಿಣಗಿ, ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕುಚಬಾಳ, ಲಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಚಂದ್ರಶೇಖರ ಕವಟಗಿ, ಬಿಜೆಪಿ ನಗರ ಮಂಡಳ ಅಧ್ಯಕ್ಷ ಮಳುಗೌಡ ಪಾಟೀಲ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಲಿದ್ದಾರೆ. ಈ ಯೋಜನೆಯ ಲಾಭ ಪಡೆದುಕೊಳ್ಳಬಯಸುವವರು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಸೇರಿದಂತೆ ವಿವಿಧ ಪೂರಕ ದಾಖಲೆಗಳನ್ನು ತರಬೇಕು, ಹೆಚ್ಚಿನ ಮಾಹಿತಿಗಾಗಿ ಕಿರಣ ಪಾಟೀಲ (೯೯೧೬೪೫೯೯೯), ಬಸವರಾಜ ಬೈಚಬಾಳ ೯೯೦೨೯೯೭೫೨೭, ಸಚಿನ್ ಬೊಂಬಳೆ ೯೮೮೬೪೪೦೧೬೬ ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Related Posts
Add A Comment