ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ ಪ್ರವಾಸೋದ್ಯಮ ಇಲಾಖೆ ಹಾಗೂ ವೃಕ್ಷ ಅಭಿಯಾನ ಪ್ರತಿಷ್ಠಾನ ಇವರ ಸಹಯೋಗದಲ್ಲಿ ಡಿ.೦೭ ರಂದು ವೃಕ್ಷಥಾನ್ ಪಾರಂಪರಿಕ ಓಟ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಬುಧವಾರ ಟೀ ಶರ್ಟ್ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಜಿಲ್ಲಾಧಿಕಾರಿ ಡಾ. ಆನಂದ ಕೆ., ಎಸ್ಪಿ ಲಕ್ಷ್ಮಣ ನಿಂಬರಗಿ, ಜಿ. ಪಂ. ಸಿಇಓ ರಿಷಿ ಆನಂದ, ವಿಜಯಪುರ ನಗರ ಡಿವೈಎಸ್ಪಿ ಡಾ. ಬಸವರಾಜ ಯಲಿಗಾರ, ಪ್ರಾದೇಶಿಕ ಅರಣ್ಯ ಇಲಾಖೆ ವಲಯ ಅರಣ್ಯಾಧಿಕಾರಿ ಮಲ್ಲಿಕಾರ್ಜುನ ಕುಸನಾಳ, ಡಾ. ಮುರಿಗೇಶ ಪಟ್ಟಣಶೆಟ್ಟಿ, ಡಿವೈಎಸ್ಪಿ ಉಪಾಸೆ, ಸಚೀನ ಪಾಟೀಲ, ಸಂದೀಪ ಮಡಗೊಂಡ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

