ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೫-೨೬ನೇ ಸಾಲಿನಲ್ಲಿ ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ ನೃತ್ಯ, ಸುಗಮ ಸಂಗೀತ, ಕಥಾ ಕೀರ್ತನ ಮತ್ತು ಗಮಕ ಕಲಾ ಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ ೧೬ ರಿಂದ ೨೪ ವರ್ಷ ವಯೋಮಾನದ ಅಭ್ಯರ್ಥಿಗಳಿಂದ ಶಿಷ್ಯ ವೇತನ ಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ೨೦-೧೨-೨೦೨೫ ಕೊನೆಯ ದಿನವಾಗಿದ್ದು, ಶಿಷ್ಯವೇತನದ ಬಗ್ಗೆ ಮಾಹಿತಿ ಹಾಗೂ ಅರ್ಜಿಯನ್ನು sangeeetanrityaacademy.karnataja.gov.inನಲ್ಲಿ ಪಡೆದುಕೊಳ್ಳಬಹುದು. ಜಿಲ್ಲೆಯ ಸಹಾಯಕ ನಿರ್ದೇಶಕರ ಕಚೇರಿ ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದಲೂ ಪಡೆಯಬಹುದಾಗಿದೆ. ಸಂದರ್ಶನದ ಬದಲಿಗೆ ಅಭ್ಯರ್ಥಿಗಳು ಅರ್ಜಿಯಲ್ಲಿ ನೀಡಿರುವ ಪಠ್ಯಕ್ರಮವನ್ನು ವಿಡಿಯೋ ಚಿತ್ರೀಕರಿಸಿ ಪೆನ್ ಡ್ರೈವ್ ನಲ್ಲಿ ರಿಜಿಸ್ಟರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, ೨ನೆಯ ಮಹಡಿ, ಜೆಸಿ ರಸ್ತೆ ಬೆಂಗಳೂರು -೫೬೦೦೦೨ ಕಾರ್ಯಾಲಯಕ್ಕೆ ಅಂಚೆ ಅಥವಾ ಖುದ್ದಾಗಿ ತಲುಪಿಸಬಹುದು ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
