ಬೆಂಗಳೂರು: ಅತ್ತಿಬೆಲೆ ಪ್ರಕರಣದಲ್ಲಿ ತಹಶೀಲ್ದಾರ್, ಇನ್ಸ್ ಪೆಕ್ಟರ್ ಮತ್ತು ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಅಮಾನತಿಗೆ ಸಿಎಂ ಸೂಚನೆ ನೀಡಿದ್ದಾರೆ.
ಪ್ರಕರಣದ ಸಂಬಂಧ ಇಂದು ಸಭೆ ನಡೆಸಿದ ಸಿಎಂ, ಈ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳೂ ಎಲ್ಲ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.
ಅತ್ತಿಬೆಲೆ ಪಟಾಕಿ ದುರಂತ ಪ್ರಕರಣದಲ್ಲಿ ಗೋಡೌನ್‌ಗೆ ಅನುಮತಿ ನೀಡಿರಲಿಲ್ಲ. ಮಾರಾಟಕ್ಕೆ ಮಾತ್ರ ಅನುಮತಿ ನೀಡಲಾಗಿತ್ತು ಎಂಬ ಮಾಹಿತಿಯನ್ನು ಅಧಿಕಾರಿಗಳು ಸಭೆಯ ಗಮನಕ್ಕೆ ತಂದಿದ್ದಾರೆ. ರಾಜ್ಯದೆಲ್ಲೆಡೆ, ತಪಾಸಣೆ ನಡೆಸಿ, ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಎಲ್ಲ ಗೋಡೌನ್‌ಗಳು ಹಾಗೂ ಮಳಿಗೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು, ಅವುಗಳ ಪರವಾನಗಿ ರದ್ದುಪಡಿಸಬೇಕು ಎಂದು ಸಿಎಂ ಸೂಚಿಸಿದರು.
Related Posts
Add A Comment