ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ೨೦೨೫-೨೬ನೇ ಸಾಲಿಗೆ ಉದ್ಯೋಗಿನಿ ಯೋಜನೆ, ಚೇತನಾ ಯೋಜನೆ, ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಮತ್ತು ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಗಳಿಗೆ ಫಲಾನುಭವಿಗಳಿಂದ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಿಗೆ ಅರ್ಹ ಫಲಾನುಭವಿಗಳು ಆನ್‌ಲೈನ್ ಮತ್ತು ಆಪ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಡಿಸೆಂಬರ್ ೧೫ರೊಳಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ನೇರವಾಗಿ ಅಥವಾ ಬಾಪೂಜಿ ಸೇವಾ ಕೇಂದ್ರ, ಗಾಮ ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ದೂರವಾಣಿ ಸಂಖ್ಯೆ:೦೮೩೫೨-೨೯೫೩೫೩ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ.ಚವ್ಹಾಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
