ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಧರ್ತಿ ಆಭಾ ಜನ ಜಾತಿಯ ಗ್ರಾಮ ಉತ್ಕರ್ಷ ಅಭಿಯಾನ ಕಾರ್ಯಕ್ರಮದಡಿ ಮೀನುಗಾರರಿಗೆ ಮೀನು ಮಾರಾಟಕ್ಕಾಗಿ ಐಸ್ ಬಾಕ್ಸ್ ನೊಂದಿಗೆ ದ್ವಿಚಕ್ರ ವಾಹನ ಹಾಗೂ ತ್ರಿ ಚಕ್ರ ವಾಹನ ಖರೀದಿಗೆ ೨೦೨೫-೨೬ ನೇ ಸಾಲಿನ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸೇರಿದ ನಿಡಗುಂದಿ ತಾಲೂಕಿನ ಇಟಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಜನಾಳ ಗ್ರಾಮ, ತಾಳಿಕೋಟಿ ತಾಲೂಕಿನ ಕಲಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲಕೇರಿ ಗ್ರಾಮ, ಅಸ್ಕಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಸ್ಕಿ ಗ್ರಾಮ, ಸಾಸನೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೊಮನಾಳ ಗ್ರಾಮ, ಕೊಣ್ಣೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಪಡೇಕನೂರ ಹಾಗೂ ಕೊಣ್ಣೂರ ಗ್ರಾಮ, ಬಾವೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ವನಹಳ್ಳಿ ಗ್ರಾಮ, ತುಂಬಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತುಂಬಗಿ ಹಾಗೂ ಹೊಸಹಳ್ಳಿ ಗ್ರಾಮ, ಬಂಟನೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಂಟನೂರ ಗ್ರಾಮ, ಕೊಡಗಾನೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಡಗಾನೂರ, ಕಾರಗನೂರ, ಬೇಲೂರ ಹಾಗೂ ನಾವದಗಿ ಗ್ರಾಮ, ಹಿರೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ತಮದಡ್ಡಿ ಗ್ರಾಮ, ಮಿಣಜಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಿಣಜಿಗಿ ಗ್ರಾಮ, ಬ.ಸಾಲವಾಡಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಾಲವಾಡಗಿ ಹಾಗೂ ಗುಂಡಕನಾಳ ಗ್ರಾಮ, ಮೂಕಿಹಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾಗೂರ ಗ್ರಾಮ.
ಈ ಗ್ರಾಮಗಳ ಮೀನುಗಾರರು ಮೀನುಗಾರಿಕೆ ಸಹಕಾರಿ ಸಂಘದ ಸದಸ್ಯರಾಗಿರಬೇಕು ಅಥವಾ ಮೀನುಗಾರಿಕೆ ವೃತ್ತಿಯಲ್ಲಿ ತೊಡಗಿರುವ ಮೀನುಗಾರರು ಡಿಸೆಂಬರ್ ೨೩ ರೊಳಗಾಗಿ ಸಂಬಂಧಿಸಿದ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರು ಮುದ್ದೇಬಿಹಾಳ ಕಚೇರಿಗೆ ಅರ್ಜಿ ಸಲ್ಲಿಸಬಹುದು.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು ಮುದ್ದೇಬಿಹಾಳ ಮೊ ಸಂಖ್ಯೆ: ೯೮೮೦೨೧೦೫೦೫ ಸಂಪರ್ಕಿಸಬಹುದು.
