ಗೃಹ ಸಚಿವರಿಂದ ಪ್ರಶಸ್ತಿ ಸ್ವೀಕರಿಸಿದ ವಿನಯಕುಮಾರ ಪಾಟೀಲ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೫ನೇ ಸಾಲಿನಲ್ಲಿ ಜಿಲ್ಲೆಗೆ ನಿಗದಿಪಡಿಸಿದ ಗುರಿಗಿಂತ ಅತಿ ಹೆಚ್ಚು ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹ ಮಾಡಿದ ಹೆಗ್ಗಳಿಕೆಗೆ ವಿಜಯಪುರ ಜಿಲ್ಲೆಯು ಪ್ರಶಸ್ತಿಗೆ ಭಾಜನವಾಗಿದ್ದು, ಸಶಸ್ತ್ರ ಪಡೆಗಳ ದ್ವಜ ದಿನಾಚರಣೆ ಅಂಗವಾಗಿ ಬೆಂಗಳೂರಿನ ರಾಜಭವನದಲ್ಲಿ ಡಿಸೆಂಬರ್ ೭ರಂದು ನಡೆದ ಸಮಾರಂಭದಲ್ಲಿ ಆಹಾರ ಇಲಾಖೆಯ ಉಪ ನಿರ್ದೇಶಕರೂ ಆದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರೂ ಆದ ವಿನಯಕುಮಾರ ಪಾಟೀಲ ಅವರು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.
ಕಳೆದ ವರ್ಷವೂ ಕೂಡಾ ವಿಜಯಪುರ ಜಿಲ್ಲೆಗೆ ಪ್ರಶಸ್ತಿಗೆ ಭಾಜನವಾಗಿತ್ತು. ಕಾರ್ಯಕ್ರಮದಲ್ಲಿ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ಕೆ.ವಿ.ಶರತ್‌ಚಂದ್ರ, ಏರ್ ವೈಸ್ ಮಾಶಲ್ ಕೆ.ಎನ್. ಸಂತೋಷ (ವಿಎಸ್‌ಎಂ ನಿವೃತ್ತ), ಸೈನಿಕ ಕಲ್ಯಾಣ ಮತ್ತು ಪುನರವಸತಿ ಇಲಾಖೆ ನಿರ್ದೇಶಕರಾದ ಫ್ಲೆöÊಟ್ ಲೆಫ್ಟಿನಂಟ್ ಎಂ.ಎಸ್.ಲೋಕಾಕ್ಷ ಉಪಸ್ಥಿತರಿದ್ದರು.

