Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಂತಿಮ ಹಂತ ತಲುಪಿದ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ

ಸರಕಾರಿ ಸೌಲಭ್ಯ ಸದ್ಬಳಕೆಯಿಂದ ಗುರಿ ತಲುಪಿ :ಬಿರಾದಾರ

ದೇವರಾಜ ಅರಸು ಚಿಂತನೆಗಳು ಇಂದಿಗೂ ಪ್ರಸ್ತುತ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ವ ಸಮುದಾಯಗಳನ್ನು ಸಮಾನವಾಗಿ ಕಾಣುವ ವೀರಶೈವ ಲಿಂಗಾಯತರು
(ರಾಜ್ಯ ) ಜಿಲ್ಲೆ

ಸರ್ವ ಸಮುದಾಯಗಳನ್ನು ಸಮಾನವಾಗಿ ಕಾಣುವ ವೀರಶೈವ ಲಿಂಗಾಯತರು

By No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ವೀರಶೈವ ಲಿಂಗಾಯತ ಸಮಾಜ ಮತ್ತು ಮಠಾಧೀಶರು ಸರ್ವರನ್ನು ಒಗ್ಗೂಡಿಸಿಕೊಂಡು ಸರ್ವ ಸಮುದಾಯಗಳನ್ನು ಸಮಾನವಾಗಿ ಕಾಣುತ್ತಾ ಸಾಗುತ್ತಿದ್ದಾರೆ ಎಂದು ಜವಳಿ ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್ ಪಾಟೀಲ್ ಹೇಳಿದರು.
ಅವರು ಶನಿವಾರ ಸಾಯಂಕಾಲ ಇಂಡಿ ಪಟ್ಟಣದ ಹಳೆ ಸಾಲೋಟಗಿ ರಸ್ತೆಯಲ್ಲಿ ಶಿರಶ್ಯಾಡ ಸಂಸ್ಥಾನ ಹಿರೇಮಠದ ಇಂಡಿ ಶಾಖಾಮಠದಲ್ಲಿ ನಿರ್ಮಾಣಗೊಳ್ಳುತ್ತಿರುವ ಬಡ ಮಕ್ಕಳ ಶಿಕ್ಷಣ ಮತ್ತು ಉಚಿತ ಅನ್ನಪ್ರಸಾದ ಹಾಗೂ ವಸತಿ ನಿಲಯದ ಮಹಾದ್ವಾರದ ಪ್ರಥಮ ಹೊಸ್ತಿಲ ಪೂಜಾ ಕಾರ್ಯಕ್ರಮದ ನಿಮಿತ್ಯ ಹಮ್ಮಿಕೊಂಡಿದ್ದ ಪ್ರವಚನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವೀರಶೈವ ಮಠಾಧೀಶರು ಜಾತಿ, ಧರ್ಮ, ಮತ, ಪಂಥ ಎನ್ನದೆ ಸರ್ವರಿಗೂ ಸಮಾನತೆಯಿಂದ ಕಾಣುತ್ತಾರೆ. ಹೀಗಾಗಿ ವೀರಶೈವ ಧರ್ಮ ಅತಿ ಶ್ರೇಷ್ಠ ಧರ್ಮ ಎಂದರು.
ಶಿರಶ್ಯಾಡ ಹಿರೇಮಠದ ಅಭಿನವ ಮುರುಗೇಂದ್ರ ಶಿವಾಚಾರ್ಯರು ಇಂದಿನ ನಗರದಲ್ಲಿ ಬಡ ಮಕ್ಕಳಿಗಾಗಿ ಉಚಿತ ಪ್ರಸಾದ ನಿಲಯ ಹಾಗೂ ವಸತಿ ನಿಲಯ ನಿರ್ಮಾಣ ಮಾಡುತ್ತಿರುವುದು ಸಂತಸ ತಂದಿದೆ. ನಾನು ಈಗಾಗಲೇ ಈ ಕಾರ್ಯಕ್ಕೆ ವೈಯಕ್ತಿಕವಾಗಿ 5 ಲಕ್ಷ ರೂಪಾಯಿ ದೇಣಿಗೆ ನೀಡಿದ್ದು, ಇನ್ನು ನನ್ನಿಂದ ಅಗತ್ಯವಿದ್ದಲ್ಲಿ ನನ್ನನ್ನು ಸಂಪರ್ಕಿಸಿದರೆ ಸಾಧ್ಯವಾದಷ್ಟು ಸಹಾಯ ಸಹಕಾರ ಮಾಡುತ್ತೇನೆ. ಬೇಗನೆ ಈ ಕಟ್ಟಡ ಕಾಮಗಾರಿ ಪೂರ್ಣಗೊಂಡು ಬಡ ಮಕ್ಕಳಿಗೆ ಅನುಕೂಲ ಆಗುವಂತೆ ಆಗಲಿ ಎಂದು ಶುಭ ಹಾರೈಸಿದರು.
ಇಂದು ರಾಜಕಾರಣಿಗಳು ಧರ್ಮ ಧರ್ಮಗಳ ಮಧ್ಯೆ ಕಿತ್ತಾಟ ಹಚ್ಚಿ ರಾಜಕಾರಣ ಮಾಡುತ್ತಾರೆ, ಆದರೆ ವೀರಶೈವ ಮಠಾಧೀಶರು ಎಲ್ಲ ಧರ್ಮಗಳನ್ನು ಒಂದೇ ಧರ್ಮದ ದಾರಿಯಲ್ಲಿ ನಡೆಸುತ್ತಾ ಬಂದಿರುವುದು ನಮ್ಮೆಲ್ಲರ ಹೆಮ್ಮೆಯ ಸಂಗತಿ ಎಂದರು.
ತಾಳಿಕೋಟೆ ಖಾಸ್ಗತೇಶ್ವರ ಮಠದ ಪೂಜ್ಯ ಸಿದ್ದಲಿಂಗ ದೇವರು ಆಶೀರ್ವಚನ ನೀಡಿ, ನಮ್ಮ ದೇಹದ ಎಲ್ಲಾ ಅಂಗಾಂಗಗಳು ಸುಂದರವಾಗಿರುವಂತೆ ನಾವು ನೋಡಿಕೊಳ್ಳಬೇಕೆಂದರೆ ಮೊದಲು ನಮ್ಮ ನಾಲಿಗೆ ನಮ್ಮ ಹಿಡಿತದಲ್ಲಿರಬೇಕು. ನಾಲಿಗೆ ಹಿಡಿತ ತಪ್ಪಿದರೆ ಅದರಿಂದ ಆಗುವ ಅನಾಹುತ ಬಹಳಷ್ಟು, ಹೀಗಾಗಿ ಯಾರ ಜೊತೆ ಮಾತನಾಡಿದರು ಸೌಮ್ಯ ಹಾಗೂ ಮೃದುವಾಗಿ ಮಾತನಾಡಿ, ಮಾನವ ಜನ್ಮದಲ್ಲಿ ಹುಟ್ಟಿದ ನಾವೆಲ್ಲ ಒಂದು ದಿನ ಈ ದೇಹವನ್ನು ಬಿಟ್ಟು ಹೋಗಲೇಬೇಕು, ಶ್ರೀಮಂತರಾದವರು, ಬಡವರು, ಮಧ್ಯಮ ವರ್ಗದವರು ಯಾರಿದ್ದರೂ ಸಹ ಒಂದು ದಿನ ನಮ್ಮ ದೇಹ ತ್ಯೆಜಿಸಲೇಬೇಕು. ಇರುವಷ್ಟು ದಿನ ನಾವು ದುಡಿದಿದ್ದರಲ್ಲಿ ಒಂದಷ್ಟು ಭಾಗ ದಾನ ಧರ್ಮ ಮಾಡಿ ಎಲ್ಲರೊಂದಿಗೂ ಅನ್ಯೋನ್ಯದಿಂದ ಬದುಕಿ ಬಾಳಿದರೆ ನಮ್ಮ ಜೀವನ ಸಾರ್ಥಕವಾಗುತ್ತದೆ. ಶಿರಶ್ಯಾಡದ ಪರಮಪೂಜ್ಯರು ಇಂಡಿ ನಗರದಲ್ಲಿ ಬಡ ಮಕ್ಕಳಿಗಾಗಿ ಉಚಿತ ಅನ್ನಪ್ರಸಾದ ಹಾಗೂ ವಸತಿ ನಿಲಯ ಕಟ್ಟುವ ಸಂಕಲ್ಪ ಹೊಂದಿದ್ದು ಭಕ್ತರು ಇದಕ್ಕೆ ಕೈಜೋಡಿಸಿ ಶೀಘ್ರವೇ ಈ ಕಾಮಗಾರಿ ಪೂರ್ಣಗೊಂಡು ಬಡ ಮಕ್ಕಳಿಗೆ ಅನುಕೂಲವಾಗಲಿ , ಶ್ರೀಗಳ ಸಂಕಲ್ಪ ಬಹುಬೇಗನೆ ಈಡೇರಲಿ ಎಂದು ಶುಭ ಹಾರೈಸಿದರು.
ಶಿರಶ್ಯಾಡ ಮಠದ ಅಭಿನವ ಮುರುಘೇಂದ್ರ ಶಿವಾಚಾರ್ಯರು ಮಾತನಾಡಿ, ಇಂಡಿ ನಗರದಲ್ಲಿ ಬಡ ಮಕ್ಕಳಿಗಾಗಿ ಉಚಿತ ವಸತಿ ಹಾಗೂ ದಾಸೋಹ ನಿಲಯ ಕಟ್ಟಡ ನಿರ್ಮಾಣ ಮಾಡಲು ನಾನು ಬಹಳ ವರ್ಷಗಳ ಹಿಂದೆಯೇ ಸಂಕಲ್ಪ ಮಾಡಿದ್ದೆ, ಈಗ ಕಾಲ ಕೂಡಿಬಂದಿದೆ, ಈ ಕಟ್ಟಡ ನಿರ್ಮಾಣಕ್ಕೆ ಸಚಿವರಾದ ಶಿವಾನಂದ ಪಾಟೀಲರು ವೈಯಕ್ತಿಕವಾಗಿ ಹಣ ನೀಡಿದ್ದಲ್ಲದೆ, ಇನ್ನು ಏನೇ ಸಹಾಯ ಸಹಕಾರ ಇದ್ದರೂ ಹೇಳಿ ಎಂದು ತಿಳಿಸಿದ್ದಾರೆ, ಇಂತಹ ರಾಜಕಾರಣಿಗಳು ಜಿಲ್ಲೆಗೆ ಅವಶ್ಯವಾಗಿದ್ದಾರೆ. ಸೌಮ್ಯ ಸ್ವಭಾವದ ಸಚಿವರು ಧರ್ಮದ ಕಾರ್ಯಗಳಿಗೆ ಸದಾ ಮುಂಚೂಣಿಯಲ್ಲಿ ನಿಂತು ಸಹಾಯ ಮಾಡುವ ಪ್ರವೃತ್ತಿ ಬೆಳೆಸಿಕೊಂಡಿದ್ದಾರೆ. ಮುಂಬರುವ ದಿನಗಳಲ್ಲಿ ಅವರಿಗೆ ಇನ್ನೂ ಉನ್ನತ ಸ್ಥಾನಗಳು ಲಭಿಸಲಿ ಎಂದರು.
ಬಡ ಮಕ್ಕಳ ಉಚಿತ ಪ್ರಸಾದ ಹಾಗೂ ವಸತಿ ನಿಲಯಕ್ಕೆ ಇಂಡಿ ನಗರ ಹಾಗೂ ತಾಲೂಕಿನ ಜನರು ಬಹಳಷ್ಟು ಸಹಾಯ ಸಹಕಾರ ಮಾಡುತ್ತಿದ್ದಾರೆ. ಎಲ್ಲಾ ಭಕ್ತರ ಸಹಾಯದಿಂದ ಅತಿ ವೇಗವಾಗಿ ಕಟ್ಟಡ ಕಾಮಗಾರಿ ನಡೆಯುತ್ತಿದ್ದು ಶೀಘ್ರದಲ್ಲಿಯೇ ಈ ಕಟ್ಟಡ ಕಾಮಗಾರಿ ಮುಗಿದು ಉಚಿತ ಅನ್ನದಾಸೋಹ ವಸತಿ ನಿಲಯ ಪ್ರಾರಂಭವಾಗುವ ವಿಶ್ವಾಸವಿದೆ ಎಂದರು.
ಕಾರ್ಯಕ್ರಮದ ಸಾನಿಧ್ಯವನ್ನು ಗೋಳಸಾರದ ಅಭಿನವ ಪುಂಡಲಿಂಗ ಮಹಾಶಿವಯೋಗಿಗಳು, ರೋಡಗಿಯ ಶಿವಲಿಂಗೇಶ್ವರ ಮಹಾಸ್ವಾಮಿಗಳು, ಅರ್ಜುನಗಿಯ ರೇಣುಕ ಶಿವಾಚಾರ್ಯರು ವಹಿಸಿದ್ದರು.
ಮಲ್ಲಿಕಾರ್ಜುನ ಗುರುಕುಲೆ ಪ್ರಾಸ್ತಾವಿಕವಾಗಿ ಮಾತನಾಡಿದರು,
ವೇದಿಕೆಯಲ್ಲಿ ಕಾಂಗ್ರೆಸ್ ಮುಖಂಡ ರಾಕೇಶ ಕಲ್ಲೂರ, ಎಂ.ಆರ್. ಪಾಟೀಲ, ಶ್ರೀಮಂತ ಇಂಡಿ, ಅಶೋಕಗೌಡ ಬಿರಾದಾರ, ಉದ್ಯಮಿದಾರರಾದ ಅನಿಲ್ ಏಳಗಿ, ಉದ್ದಿಮೆದಾರ ಸಂತೋಷ ಶಾಪೇಟಿ, ಡಿ.ಆರ್.ಶಹಾ, ಜಟ್ಟೆಪ್ಪ ರವಳಿ, ಶಿವಯೋಗಪ್ಪ ಚನ್ನಗೊಂಡ, ಮಲ್ಲನಗೌಡ ಪಾಟೀಲ, ಶ್ರೀಕಾಂತ ಕುಡಿಗನೂರ, ಸತೀಶ ಕುಂಬಾರ, ಪ್ರಭುಗೌಡ ಪಾಟೀಲ, ಸುಧೀರ ಕರಕಟ್ಟಿ, ಉಮೇಶ ದೇಗಿನಾಳ, ಶಾಂತುಗೌಡ ಬಿರಾದಾರ, ಹರಿಶ್ಚಂದ್ರ ಪವಾರ, ಜೀತಪ್ಪ ಕಲ್ಯಾಣಿ, ಈರಣ್ಣ ತೆಲ್ಲೂರ, ಬಾಳು ಮುಳಜಿ, ರಾಮಸಿಂಗ ಕನ್ನೊಳ್ಳಿ ಸೇರಿದಂತೆ ಅನೇಕರು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಂತಿಮ ಹಂತ ತಲುಪಿದ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ

ಸರಕಾರಿ ಸೌಲಭ್ಯ ಸದ್ಬಳಕೆಯಿಂದ ಗುರಿ ತಲುಪಿ :ಬಿರಾದಾರ

ದೇವರಾಜ ಅರಸು ಚಿಂತನೆಗಳು ಇಂದಿಗೂ ಪ್ರಸ್ತುತ

‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ ಪುರಸ್ಕೃತ ಮಠೋಳಿ ಗೆ ಸನ್ಮಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಂತಿಮ ಹಂತ ತಲುಪಿದ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ
    In (ರಾಜ್ಯ ) ಜಿಲ್ಲೆ
  • ಸರಕಾರಿ ಸೌಲಭ್ಯ ಸದ್ಬಳಕೆಯಿಂದ ಗುರಿ ತಲುಪಿ :ಬಿರಾದಾರ
    In (ರಾಜ್ಯ ) ಜಿಲ್ಲೆ
  • ದೇವರಾಜ ಅರಸು ಚಿಂತನೆಗಳು ಇಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ ಪುರಸ್ಕೃತ ಮಠೋಳಿ ಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಕೇವಲ 5 ಗಂಟೆಯಲ್ಲೇ ೧೧ಎಕರೆ ಜಮೀನು ಹರಗಿದ ರೈತ ಗುರುಪಾದ
    In (ರಾಜ್ಯ ) ಜಿಲ್ಲೆ
  • 4 ದಿನ ಪೂರೈಸಿದ ಬಿಜೆಪಿ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಕೂಡಗಿ ಎನ್‌ಟಿಪಿಸಿಯಿಂದ ವಿಶೇಷಚೇತನರಿಗೆ ಸಾಧನಗಳ ವಿತರಣೆ
    In (ರಾಜ್ಯ ) ಜಿಲ್ಲೆ
  • ಎ.ವಿ.ಎಸ್. ಆಯುರ್ವೇದ ಕಾಲೇಜ್: ಆ.24 ರಿಂದ ಆರೋಗ್ಯ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಶ್ವಿನಿ ಹತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ :ನಿಮಾದಾರ
    In (ರಾಜ್ಯ ) ಜಿಲ್ಲೆ
  • ದುಶ್ಚಟಗಳ ಭಿಕ್ಷೆ, ಸದ್ಗುಣಗಳ ದೀಕ್ಷೆ: ಜನಜಾಗೃತಿ ಪಾದಯಾತ್ರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.