ಉದಯರಶ್ಮಿ ದಿನಪತ್ರಿಕೆ
ತಿಕೋಟಾ: ತಿಕೋಟಾ ಮತ್ತು ಬಬಲೇಶ್ವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2025-28 ಅವಧಿಗೆ ನಡೆದ ಚುನಾವಣೆಯಲ್ಲಿ ಎಲ್ಲ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬುಧವಾರ ಮುಸ್ಸಂಜೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸಾತಲಿಂಗಯ್ಯ ಶಂ. ಸಾಲಿಮಠ, ಉಪಾಧ್ಯಕ್ಷೆಯಾಗಿ ಲಕ್ಷ್ಮಿ ಚಂ. ಹಿರೇಮಠ, ಪ್ರಧಾನ ಕಾರ್ಯದರ್ಶಿ ಶ್ರೀಕಾಂತ ಹಡಲಗೇರಿ, ನಿಂಗಪ್ಪ ಮಲ್ಲಪ್ಪ ಸಂಗಾಪುರವರು ಖಜಾಂಚಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯಾಗಿ ಮಹೇಶ ವಿ. ಶಟಗಾರ, ಶರಣಬಸಪ್ಪ ಮಸಳಿ ಹಾಗೂ ಶಶಿಕಾಂತ ಮೆಂಡೆಗಾರ ಕಾರ್ಯ ನಿರ್ವಹಿಸಿದರು. ಅಲ್ಲದೇ, ನೂತನವಾಗಿ ಅವಿರೋಧವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಘೋಷಣೆ ಪತ್ರ ವಿತರಿಸಿ ಶುಭ ಕೋರಿದರು.

