ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಪಟ್ಟಣದ ಆರ್.ಡಿ.ಪಾಟೀಲ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿ ಶ್ರೀನಿವಾಸ್ ನಂದಶೆಟ್ಟಿ ಇತನು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಜರುಗಿದ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮಹಾವಿದ್ಯಾಲಯಗಳ ರಾಜ್ಯಮಟ್ಟದ ಹ್ಯಾಂಡ್‌ಬಾಲ್ ಆಟದಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಚೇರಮನ್ನರಾದ ಡಾ. ಪ್ರಭು ಸಾರಂಗದೇವ ಶಿವಾಚಾರ್ಯರು, ಉತ್ತರಾಧಿಕಾರಿಗಳಾದ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು, ಆಡಳಿತ ಮಂಡಳಿಯ ಸರ್ವ ಸದಸ್ಯರು, ದೈಹಿಕ ಉಪನ್ಯಾಸಕ ಗವಿಸಿದ್ದಪ್ಪ ಆನೆಗುಂದಿ, ಪ್ರಾಚಾರ್ಯ ಭೀಮನಗೌಡ ಸಿಂಗನಳ್ಳಿ ಸೇರಿದಂತೆ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

