ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಮಾನವನಿಗೆ ಆಕಸ್ಮಿಕ ಸಮಯದಲ್ಲಿ ತುರ್ತಾಗಿ ಅವಶ್ಯವಾಗಿ ಬೇಕಾಗುವ ರಕ್ತವು ಅಮೂಲ್ಯ ಜೀವ ಉಳಿಸುವ ವಸ್ತುವಾಗಿದೆ ಎಂದು ಯಂಕಂಚಿ ಶ್ರೀಮಠ ಅಭಿನವ ರುದ್ರಮುನಿ ಶಿವಾಚಾರ್ಯರು ಹೇಳಿದರು.
ಸಿಂದಗಿ ಮತಕ್ಷೇತ್ರದ ಮಂಗಳೂರು ಗ್ರಾಮದಲ್ಲಿ ಸಮರ್ಥ ಸದ್ಗುರು ಶ್ರೀ ಭೀಮಾಶಂಕರ ಮಹಾರಾಜರ ೭೧ನೇ ಜಾತ್ರಾ ಮಹೋತ್ಸವದ ನಿಮಿತ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸಹಯೋಗದಲ್ಲಿ ಹಮ್ಮಿಕೊಂಡ ರಕ್ತದಾನ ಶಿಬಿರಕ್ಕೆ ಚಾಲನೆ ಮಾತನಾಡಿದ ಅವರು, ಸಾಮಾಜದ ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡುವ ಮೂಲಕ ಮಾದರಿಯಾಗಬೇಕು. ರಕ್ತದಾನ ಮಾಡಿದರೆ ತಮ್ಮ ದೇಹದ ಕೊಬ್ಬಿನಾಂಶ ಕಡಿಮೆಯಾಗಿ ಹೊಸ ರಕ್ತ ಉತ್ಪತ್ತಿಯಾಗಲಿದೆ ಎಂದರು.
ಇದೇ ಸಂದರ್ಭದಲ್ಲಿ ಯಂಕಂಚಿ ಶ್ರೀಮಠದ ಅಭಿನವ ರುದ್ರಮುನಿ ಶಿವಾಚಾರ್ಯರ, ಬಮ್ಮನಹಳ್ಳಿ ಶ್ರೀಮಠದ ಶ್ರೀ ಸದ್ಗುರು ನರಸಿಂಹ ಮಹಾರಾಜರು, ಐನಾಪುರ ಶ್ರೀಮಠದ ಉಪಮನ್ಯು ಶಿವಾಚಾರ್ಯರ ಸಮ್ಮುಖದಲ್ಲಿ ಮುತೈದೆಯರ ಉಡಿ ತುಂಬುವ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದಲ್ಲಿ ಸಿಂದಗಿ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ತಾಲೂಕಾಧ್ಯಕ್ಷರಾಗಿ ಆಯ್ಕೆಯಾದ ಮಹಾಂತೇಶ ನೂಲಾನವರ ಹಾಗೂ ಕಾರ್ಯಕಾರಿಣಿ ಸದಸ್ಯರಾಗಿ ಆಯ್ಕೆಯಾದ ಸಿದ್ದಣ್ಣ ಕಡಗಂಚಿ ಅವರಿಗೆ ಯಂಕಂಚಿ ಶ್ರೀಗಳು ಸನ್ಮಾನಿಸಿ ಆಶೀರ್ವದಿಸಿದರು.
ಈ ವೇಳೆ ಸ್ವಯಂ ಪ್ರೇರಿತರಾಗಿ ಶ್ರೀಮಠದ ಭಕ್ತರು ಹಾಗೂ ಸಾರ್ವಜನಿಕರು ಶಿಬಿರದಲ್ಲಿ ೩೫ಕ್ಕೂ ಅಧಿಕ ಜನರು ರಕ್ತದಾನ ಮಾಡಿದರು.
ಈ ವೇಳೆ ತಾಲೂಕು ಸಾರ್ವಜನಿಕ ಆಸ್ಪತ್ರೆಯ ರಕ್ತಭಂಡಾರದ ಪ್ರಯೋಗಾಲಯ ತಾಂತ್ರಿಕ ಅಧಿಕಾರಿ ರಾಜು ನರಗೋದಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಕುಲಕರ್ಣಿ, ಆಯುಷ್ಯ ವೈದ್ಯಾಧಿಕಾರಿ ಡಾ.ಮಹಾಂತೇಶ ಹಿರೇಮಠ, ಭೀಮಾ ಸಂಸ್ಥೆಯ ಅಧ್ಯಕ್ಷ ವಿಠ್ಠಲ ಕೋಳೂರ, ಭೀಮಾಶಂಕರ ತಾರಾಪುರ, ಶರಣು ಮಾವೂರ, ಶಾಂತು ಕುಂಬಾರ, ದಾನೇಶ ಬಮ್ಮಣ್ಣಿ, ಮಲ್ಲಿಕಾರ್ಜುನ ಅಲ್ಲಾಪುರ, ಭಗವಂತ್ರಾಯ ರೇವೂರ, ವನಿತಾ ತಾರಾಪುರ, ನಿರ್ಮಲಾ ಅಲ್ಲಾಪುರ, ಆರತಿ ಮಾವೂರ ಸೇರಿದಂತೆ ಅನೇಕರು ಇದ್ದರು.

