Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶ್ರೀಗಳು ತೋರಿದ ಮಾರ್ಗ ಸೂರ್ಯ ಚಂದ್ರ ಇರುವರೆಗೂ ಚಿರಸ್ಥಾಯಿ
(ರಾಜ್ಯ ) ಜಿಲ್ಲೆ

ಶ್ರೀಗಳು ತೋರಿದ ಮಾರ್ಗ ಸೂರ್ಯ ಚಂದ್ರ ಇರುವರೆಗೂ ಚಿರಸ್ಥಾಯಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಗಳೇಶ್ವರ ವಿರಕ್ತಮಠದ ಲಿಂ. ಶ್ರೀ ಚನ್ನಬಸವ ಮಹಾಸ್ವಾಮಿಗಳ ಅಂತಿಮ ದರ್ಶನ ಪಡೆದ ಸಚಿವ ಎಂ.ಬಿ.ಪಾಟೀಲ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಇಂಗಳೇಶ್ವರ ವಿರಕ್ತಮಠದ ಪರಮಪೂಜ್ಯ ಶ್ರೀ ಚನ್ನಬಸವ ಮಹಾಸ್ವಾಮಿಗಳು ಲಿಂಗೈಕ್ಯರಾದರೂ ಅವರು ನಿರ್ಮಿಸಿರುವ ವಚನಶಿಲಾ ಮಂಟಪ ಮತ್ತು ಹಾಕಿಕೊಟ್ಟಿರುವ ಮಾರ್ಗ ಸೂರ್ಯ ಚಂದ್ರ ಇರುವವರೆಗೂ ಚಿರಸ್ಥಾಯಿಯಾಗಿರಲಿವೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.
ಇಂದು ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದಲ್ಲಿ ಲಿಂ. ಶ್ರೀ ಚನ್ನಬಸವ ಮಹಾಸ್ವಾಮಿಗಳ ಅಂತಿಮ ದರ್ಶನ ಪಡೆದ ಅವರು ಭಕ್ತಿಪೂರ್ವಕ ಶ್ರದ್ಧಾಂಜಲಿ ಸಭೆಯಲ್ಲಿ ಪಾಲ್ಗೊಂಡು ನುಡಿನಮನ ಸಲ್ಲಿಸಿದರು.
ಶ್ರೀಗಳನ್ನು ಕಳೆದುಕೊಂಡು ನಾವು ಬಡವರಾಗಿದ್ದೇವೆ. ಬಸವಣ್ಣನವರ ಜನ್ಮಭೂಮಿಯಲ್ಲಿ ಬಸವಾದಿ ಶರಣರ ಸಾಹಿತ್ಯ, ವಚನಗಳು ಹಾಗೂ ತತ್ವ ಸಿದ್ಧಾಂತಕ್ಕೆ ತಕ್ಕಂತೆ ಶ್ರೀಗಳು ನಡೆದುಕೊಂಡಿದ್ದಾರೆ. ಅಲ್ಲದೇ, ಅವರ ತತ್ವಗಳ ಪ್ರಸಾರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಯಾರ ನೆರವನ್ನೂ ಪಡೆಯದೆ ಕಷ್ಟಪಟ್ಟು, ಶ್ರಮವಹಿಸಿ, ವಚನಶಿಲಾ ಮಂಟಪ ನಿರ್ಮಿಸಿದ್ದಾರೆ. ೧೨ನೇ ಶತಮಾನದಲ್ಲಿ ಅನುಭವ ಮಂಟಪದ ಬಸವಾದಿ ಶರಣರ ವಚನ ಸಾಹಿತ್ಯವನ್ನು ಶಿಲಾ ಮಂಟಪದ ಮೂಲಕ ಮುಂದಿನ ಪೀಳಿಗೆಗೆ ಶಾಶ್ವತವಾಗಿ ಉಳಿಸುವ ಅಮೂಲ್ಯ ಕಾರ್ಯ ಮಾಡಿದ್ದಾರೆ. ಸರಳ ಜೀವಿಯಾಗಿದ್ದ ಅವರು ತಾಯಿ ಹೃದಯ ಹೊಂದಿದ್ದರು. ಅವರು ಶತಯುಷಿಗಳಾಗಬೇಕು ಎಂಬುದು ಭಕ್ತರ ಆಶಯವಾಗಿತ್ತು ಎಂದು ಅವರು ಹೇಳಿದರು.
ಬಸವಾದಿ ಶರಣರ ಸಾಲಿನಲ್ಲಿ ಶ್ರೀಗಳು ಕೂಡ ಒಬ್ಬರಾಗಿದ್ದಾರೆ. ಈಗಿನ ಕಿರಿಯ ಶ್ರೀಗಳು ಹಿರಿಯ ಶ್ರೀಗಳ ಮಾರ್ಗ ಅನುಸರಿಸಲಿ. ಬಿ.ಎಲ್.ಡಿ.ಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನ ಕೇಂದ್ರ ಬಸವ ಸಾಹಿತ್ಯ ಪ್ರಸಾರಕ್ಕೆ ಸಹಕರಿಸಲಿದೆ. ಸಿ.ಎಂ ಕೂಡ ಶ್ರೀಗಳ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವನಾಗಿ ಸರಕಾರದ ಪರವಾಗಿ ಶ್ರೀಗಳಿಗೆ ಗೌರವ ನಮನಗಳನ್ನು ಸಲ್ಲಿಸುತ್ತೇನೆ. ಅವರ ಕೊಡುಗೆ ಅಪಾರ. ದೇವರು ಮತ್ತು ಬಸವಾದಿ ಶರಣರು ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ. ಅವರು ದೈಹಿಕವಾಗಿ ನಮ್ಮೊಂದಿಗೆ ಇರದಿದ್ದರೂ ಶಿಲಾಮಂಟಪ ರೂಪದಲ್ಲಿ ನೆಲೆಸಿದ್ದಾರೆ. ಭಕ್ತರೆಲ್ಲರೂ ಅವರು ಹಾಕಿಕೊಟ್ಟಿರುವ ಸನ್ಮಾರ್ಗದಲ್ಲಿ ನಡೆಯೋಣ ಎಂದು ಸಚಿವರು ಹೇಳಿದರು.
ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರು ಮಾತನಾಡಿ, ಸಮಾಜಕ್ಕೆ, ಮಠಾಧೀಶರಿಗೆ ಸಾರ್ವಕಾಲಿಕ ಮಾದರಿ ರೀತಿ ಬದುಕಿ ತೋರಿದ ಮಹಾನ್ ಚೇತನವಾಗಿದ್ದ ಚನ್ನಬಸವ ಶ್ರೀಗಳು ಭಕ್ತರ ಪಾಲಿಗೆ ಮಾತೃಹೃದಯದ ಮಮತಾಮಯಿ ಆಗಿದ್ದರು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಕೆ.ಎಸ್.ಡಿ.ಎಲ್. ಅಧ್ಯಕ್ಷರಾದ ಶಾಸಕ ಸಿ.ಎಸ್.ನಾಡಗೌಡ, ಶಾಸಕ ರಾಜುಗೌಡ ಪಾಟೀಲ, ಜಿಲ್ಲಾಧಿಕಾರಿ ಡಾ.ಆನಂದ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಬಸವನ ಬಾಗೇವಾಡಿ ವಿರಕ್ತಮಠದ ಸಿದ್ಧಲಿಂಗ ಸ್ವಾಮೀಜಿ, ಮನಗೂಳಿ ಹಿರೇಮಠದ ಸಂಗನಬಸವ ಶಿವಾಚಾರ್ಯರು, ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ, ಇಂಗಳೇಶ್ವರ ವಿರಕ್ತಮಠದ ಸಿದ್ಧಲಿಂಗ ಶ್ರೀಗಳು, ಹುಬ್ಬಳ್ಳಿ ಮೂರು ಸಾವಿರ ಮಠದ ಶ್ರೀಗಳು, ಧಾರವಾಡ ಮುರುಘಾಮಠ ಶ್ರೀಗಳು, ನಿಜಗುಣಾನಂದ ಸ್ವಾಮೀಜಿ, ನಿಡಸೊಸಿ ಶ್ರೀಗಳು, ಜ್ಞಾನಯೋಗಾಶ್ರಮದ ಬಸವಲಿಂಗ ಶ್ರೀಗಳು, ಯರನಾಳ ಶ್ರೀಗಳು ಸೇರಿದಂತೆ ನಾಡಿನ ನಾನಾ ಭಾಗಗಳಿಂದ ಆಗಮಿಸಿದ್ದ ಅಪಾರ ಭಕ್ತರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ
    In (ರಾಜ್ಯ ) ಜಿಲ್ಲೆ
  • ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ
    In (ರಾಜ್ಯ ) ಜಿಲ್ಲೆ
  • ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .
    In (ರಾಜ್ಯ ) ಜಿಲ್ಲೆ
  • ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ಮೈಸೂರು ಜಿಲ್ಲೆಗೆ 5 ಕೋಟಿ 19 ಲಕ್ಷ ಅನುದಾನ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಭಾವೈಕ್ಯತಾ ದಿನಾಚರಣೆ…
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಭೀಮ ಗಾಯನ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶುಕ್ಷು ಮೇಳ
    In (ರಾಜ್ಯ ) ಜಿಲ್ಲೆ
  • ಹೋಳಿ ಹಬ್ಬ ಆಚರಣೆ: ವಿಶೇಷ ದಂಡಾಧಿಕಾರಿಗಳ ನೇಮಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಬೇಡಿಕೆಗಳ ಈಡೇರಿಕೆಗೆ ಮಾ.೧೧ ರಿಂದ ೧೫ವರೆಗೆ ಮುಷ್ಕರಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.