ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆ, ಆಸ್ಪತ್ರೆ, ಕ್ರೀಡಾ ಸಂಕೀರ್ಣ ಬಸ್ ಹಾಗೂ ರೈಲು ನಿಲ್ದಾಣಗಳ ಆವರಣದಲ್ಲಿ ಬೀದಿ ನಾಯಿಗಳು ಕಂಡುಬಂದಲ್ಲಿ ಸಂಬಂಧಿಸಿದವರು ಮಹಾನಗರ ಪಾಲಿಕೆ ಕಚೇರಿಯ ಸಹಾಯವಾಣಿ ಸಂಖ್ಯೆ: ೦೮೩೫೨-೨೨೨೪೭೪ ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
