ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದನ್ನು ನಿಯಂತ್ರಿಸಲು ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿರುವ ಬೀದಿನಾಯಿಗಳನ್ನು ಹಿಡಿದು ಆಶ್ರಯ ತಾಣಕ್ಕೆ ಸಾಗಿಸಲಾಗುತ್ತಿದ್ದು, ಬೀದಿನಾಯಿ ದತ್ತು ಪಡೆಯಲು ಅಥವಾ ಆಶ್ರಯ ತಾಣದಲ್ಲಿರುವ ನಾಯಿಗಳಿಗೆ ಆಹಾರ ಪೂರೈಸಲು ಇಚ್ಚಿಸುವವರು ಮಹಾನಗರಪಾಲಿಕೆಯ ಕಚೇರಿ ಸಂಪರ್ಕಿಸಬಹುದಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
