ವಿಜಯಪುರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಬೆಂಗಳೂರು ಇವರ ವತಿಯಿಂದ ಅಂಗವಿಕಲರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿ, ಸಂಸ್ಥೆ, ಹಾಗೂ ವಿಶೇಷ ಶಾಲೆಗಳಲ್ಲಿ ೧೫ ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸಿದ/ ಸಲ್ಲಿಸುತ್ತಿರುವ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ವಿಕಲಚೇತನರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ-ಸಲ್ಲಿಸುತ್ತಿರುವ ವ್ಯಕ್ತಿ, ಸಂಸ್ಥೆ ಹಾಗೂ ವಿಶೇಷ ಶಿಕ್ಷಕರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ: ೨೫-೧೦-೨೦೨೩ ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳು, ವಿಜಯಪುರ, ಕನಕದಾಸ ಬಡಾವಣೆ, ಜಿಲ್ಲಾ ಪಂಚಾಯತ ಆವರಣ, ದೂರವಾಣಿ ಸಂಖ್ಯೆ ೦೮೩೫೨-೭೯೬೦೬೦ ಗೆ ಅಥವಾ www.dwdsc.kar.nic.in ಗೆ ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ರಾಜಶೇಖರ ಹ ಧೈವಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಪ್ರಶಸ್ತಿಗೆ ವಿಕಲಚೇತನ ಕ್ಷೇತ್ರದ ಶಿಕ್ಷಕರಿಂದ ಅರ್ಜಿ ಕರೆ
Related Posts
Add A Comment