ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ರೂ ಆಗಿರುವ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಕೆಪಿಸಿಸಿ ಖಜಾಂಚಿಯಾಗಿ ಸುದೀರ್ಘ ಅವಧಿಗೆ ಕೆಲಸ ಮಾಡಿರುವ ಅವರು, ಪಕ್ಷ ಸಂಘಟನೆಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಬಾಪೂಜಿ ಶಿಕ್ಷಣ ಸಂಸ್ಥೆ ಮೂಲಕ ದಾವಣಗೆರೆ ಜಿಲ್ಲೆ ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಳಲು ಕಾರಣರಾಗಿದ್ದಾರೆ. ಅವರ ಅಗಲಿಕೆಯಿಂದ ಸಾರ್ವಜನಿಕ ಕ್ಷೇತ್ರಕ್ಕೆ ಅಷ್ಟೇ ಅಲ್ಲ, ಶಿಕ್ಷಣ ಕ್ಷೇತ್ರಕ್ಕೂ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದು ಶೋಕ ವ್ಯಕ್ತಪಡಿಸಿದ್ದಾರೆ.
ದಾವಣಗೆರೆ ಜಿಲ್ಲೆಯ ಪ್ರಗತಿ ಅವರ ದೂರದೃಷ್ಟಿಗೆ ಸಾಕ್ಷಿಯಾಗಿದೆ. ಸಚಿವರಾಗಿ, ಲೋಕಸಭಾ ಸದಸ್ಯರಾಗಿ ಅವರ ಕೊಡುಗೆ ಅನನ್ಯ. ಭಗವಂತ ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಚಿವ ಶಿವಾನಂದ ಪಾಟೀಲ ಪ್ರಾರ್ಥಿಸಿದ್ದಾರೆ.

