ವಿಜಯಪುರ: ಸರ್ಕಾರದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೊತ್ಸಾಹಕ ಸೊಸೈಟಿ ಬೆಂಗಳೂರು ವತಿಯಿಂದ ಡಿಎಸ್‌ಟಿ-ಪಿಹೆಚ್‌ಡಿ ಕಾರ್ಯಕ್ರಮದಡಿ ಶಿಷ್ಯವೇತನ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ೨೦೨೩-೨೪ನೇ ಸಾಲಿನಲ್ಲಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನೀಯರಿಂಗ್ ವಿಷಯಗಳಲ್ಲಿ ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ-ಸಂಸ್ಥೆ- ಕಾಲೇಜುಗಳಲ್ಲಿ ಪಿಹೆಚ್‌ಡಿ ಪದವಿಗೆ ಈಗಾಗಲೇ ನೋಂದಾಯಿರಾಗಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ : ೩೦-೧೦-೨೦೨೩ ಕೊನೆಯ ದಿನವಾಗಿದ್ದು, ಅರ್ಜಿ ಸಲ್ಲಿಸುವ ಲಿಂಕ್ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ ಎಂದು ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
