ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಬೆಳಗ್ಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಸಂದೇಶ ಬಂದಿದ್ದು, ಪೊಲೀಸರು ತೀವ್ರ ತಪಾಸಣೆ, ಪರಿಶೀಲನೆ ನಡೆಸಿದರು.
ಮಂಗಳವಾರ ಬೆಳಗ್ಗೆ 6:58ರ ಸುಮಾರಿಗೆ ಜಿಲ್ಲಾಧಿಕಾರಿ ಕಚೇರಿಗೆ ಇ-ಮೇಲ್ ಮೂಲಕ ಸಂದೇಶ ಸ್ವೀಕೃತವಾಗಿದ್ದು, ಅದರಲ್ಲಿ ಕಾರ್ಯಾಲಯದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಒಡ್ಡಿಯಲಾಗಿದೆ.
ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಬಾಂಬ್ ನಿಷ್ಕ್ರಿಯ ದಳದ ಅಧಿಕಾರಗಳು, ಸಿಬ್ಬಂದಿ ತಕ್ಷಣವೇ ಶ್ವಾನ ದಳದೊಂದಿಗೆ ಆಗಮಿಸಿ ಪರಿಶೀಲನೆ ನಡೆಸಿದರು.
ನಗರ ವಲಯದ ಡಿವೈಎಸ್ಪಿ, ಡಿಎಆರ್ ಡಿವೈಎಸ್ಪಿ, ಸಿಪಿಐ ಹಾಗೂ ಗೋಲಗುಂಬಜ್ ಠಾಣೆಯ ಪಿಎಸ್‌ಐ ಸೇರಿ ಹಿರಿಯ ಅಧಿಕಾರಿಗಳು ಸಹ ಜಿಲ್ಲಾಧಿಕಾರಿಗಳ ಕಾರ್ಯಾಲಯವನ್ನು ಸಂಪೂರ್ಣವಾಗಿ ಪರಿಶೀಲನೆ ಮಾಡಿದರು.
ಆದ್ದರಿಂದ ಸಿಬ್ಬಂದಿ ಹಾಗೂ ಸಾರ್ವಜನಿಕರು ಯಾವುದೇ ರೀತಿಯ ಭಯ ಪಡುವ ಅವಶ್ಯಕತೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

