ಉದಯರಶ್ಮಿ ದಿನಪತ್ರಿಕೆ
ಹೊನವಾಡ: ಶಿಕ್ಷಕರಾದ ಎಸ್ ಎ ವಾಲಿಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘‘ಪ್ರಸ್ತುತ ಯುವಕರು ದುಶ್ಚಟಗಳಿಗೆ ಬಲಿಯಾಗುವ ಮೂಲಕ ಭವಿಷ್ಯದ ಸುಂದರ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ಇಂತಹ ಚಟಗಳಿಗೆ ದಾಸರಾಗದೆ ಉತ್ತಮ ಬದುಕು ರೂಪಿಸಿಕೊಳ್ಳಬೇಕು,’’ ಎಂದರು.
ತಿಕೋಟಾ ತಾಲ್ಲೂಕಿನ ಹೊನವಾಡ
ಗ್ರಾಮದ ಬಸವಂತರಾಯ ಪ್ರೌಢ ಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರುಗಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ಕಾರ್ಯಕ್ರಮದಡಿಯಲ್ಲಿ ದುಶ್ಚಟ ಮುಕ್ತ ಸಮಾಜದ ನಿರ್ಮಾಣ ನಮ್ಮೆಲ್ಲರ ಹೊಣೆ ಎಂಬ ಧ್ಯೇಯದೊಂದಿಗೆ ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಕುರಿತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಮೂಲಕ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ ಎಂದು ಧರ್ಮಸ್ಥಳದ ಸಂಸ್ಥೆಯ ಹೊನವಾಡ ವಲಯದ ಮೇಲ್ವಿಚಾರಕರಾದ ಕಿಶೋರ ತೋರಸ್ಕರ ಪ್ರಾಸ್ತಾವಿಕ ವಾಗಿ ಮಾತನಾಡಿದರು.
ಮದ್ಯವ್ಯಸನ, ಗುಟ್ಕಾ, ಧೂಮಪಾನಗಳಿಂದ ಯುವ ಜನತೆಯ ಜೀವನ ಹಾಳಾಗುತ್ತಿದೆ. ದುಶ್ಚಟಗಳು ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾ ಬೀರುತ್ತದೆ. ಸಹವಾಸ ದೋಷಾ, ಆಕಸ್ಮಿಕ ಆಕರ್ಷಣೆಗಳ ಕಾರಣ ದುಶ್ಚಟ ಒಮ್ಮೆ ಆರಂಭವಾದರೆ ಬದುಕು ವಿನಾಶದ ಹಾದಿಯಲ್ಲಿ ಸಾಗುತ್ತದೆ ಇದರಿಂದ ವೈಯಕ್ತಿಕ ಜೀವನದ ಜೊತೆ ಜೊತೆಗೆ ಸಮಾಜದ ಸ್ವಾಸ್ಥ್ಯ ಸಹ ಹಾಳಾಗುತ್ತದೆ. ಹಾಗಾಗಿ ವಿದ್ಯಾರ್ಥಿ ಜೀವನದ ದೆಸೆಯಿಂದಲೇ ಉತ್ತಮ ಕ್ರಿಯಾಶೀಲ ಹವ್ಯಾಸಗಳನ್ನು ರೂಢಿಸಿಕೊಂಡು ಉತ್ತಮ ಸಮಾಜ ಕಟ್ಟುವ ಕಾರ್ಯಕ್ರಮಕ್ಕೆ ದೃಢ ಸಂಕಲ್ಪ ಕೈಗೊಳ್ಳಬೇಕು ಎಂದು ಶಿಕ್ಷಕರಾದ ಧರೆಪ್ಪ ಸಿದ್ನಾಥ ಹೇಳಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರಾದ ಎಂ ಜಿ ಕುಲಕರ್ಣಿ, ಎಂ ಎಸ್ ಹಿರೇಮಠ ನಿವೇದಿತಾ ಹಿರೇಮಠ, ನವೀನ ಹಿರೇಮಠ ಹಾಗೂ ವಿದ್ಯಾರ್ಥಿಗಳು ಇದ್ದರು.
ಧರ್ಮಸ್ಥಳದ ಸಂಸ್ಥೆಯ ಸೇವಾ ಪ್ರತಿನಿಧಿಗಳಾದ ಲಲಿತಾ ತಳವಾರ ನಿರೂಪಿಸಿದರು ಸುಜಾತಾ ಮಾಲಗಾರ ವಂದಿಸಿದರು.

