Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ಶ್ರಮಿಸಿ :ಪ್ರಕಾಶ
(ರಾಜ್ಯ ) ಜಿಲ್ಲೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ಶ್ರಮಿಸಿ :ಪ್ರಕಾಶ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ಮುಂದಿನ ಮೂರು ತಿಂಗಳು ಶಿಕ್ಷಕರು ಸೇರಿದಂತೆ ಎಲ್ಲರೂ ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ಕರ್ನಾಟಕ ಪ್ರೌಢಶಾಲಾ ಮಂಡಳಿ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದ ಪ್ರಕಾಶ ನಿಟ್ನಳ್ಳಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಅವರ ಸಹಯೋಗದಲ್ಲಿ ಬುಧವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಫ.ಗು.ಹಳಕಟ್ಟಿ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗಾಗಿ ವಿಜಯಪುರ-ಬಾಗಲಕೋಟೆಯ ವಿಭಾಗ ಮಟ್ಟದ ಸಂಪನ್ಮೂಲ ಶಿಕ್ಷಕರ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಮಗುವಿನ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಹಾಗೂ ಮನಸ್ಥಿತಿಯನ್ನು ಅರಿತುಕೊಂಡು ಗುಣಾತ್ಮಕ ಮತ್ತು ಪರಿಮಾಣಾತ್ಮಕವಾಗಿ ಬೋಧನಾ ಕ್ರಮಗಳನ್ನು ಅಳವಡಿಸಿಕೊಂಡು ಶಿಕ್ಷಕರು ಬೋಧನೆ ಮಾಡುವ ಮೂಲಕ ಅವರ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸಿ ವಿಷಯ ಕರಗತ ಮಾಡಿಸಬೇಕು. ಮುಂದಿನ ಮೂರು ತಿಂಗಳು ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ಕಾಳಜಿ ಪೂರಕವಾಗಿ ಶ್ರಮಿಸುವ ಹೊಣೆಗಾರಿಕೆ ನಮ್ಮೆಲ್ಲರದ್ದಾಗಿದೆ ಎಂದು ಅವರು ಹೇಳಿದರು.
ಪರೀಕ್ಷೆಗೆ ಸಂಬಂಧಿಸಿದ ನೀಲನಕ್ಷೆ, ಮಾದರಿ ಪ್ರಶ್ನೆ ಪತ್ರಿಕೆ, ಪರೀಕ್ಷಾ ಉಪಕ್ರಮಗಳನ್ನು ಈಗಾಗ ಇಂಜಿನೀಯರಿಂಗ್ ಅದರಂತೆ ಫಲಿತಾಂಶ ಸುಧಾರಣೆಗಾಗಿ ನೀಡುವ ನಿರ್ದೇಶನಗಳನ್ನು ಅಳವಡಿಸಿಕೊಂಡು, ವಿವಿಧ ರೀತಿಯ ಪರೀಕ್ಷೆಗಳನ್ನು ಏರ್ಪಡಿಸಿ, ಈ ಪರೀಕ್ಷೆಗಳನ್ನು ಮುಖ್ಯ ಪರೀಕ್ಷೆ ಎಂದೇ ಮಕ್ಕಳಿಗೆ ಮನವರಿಕೆ ಮಾಡಿಕೊಟ್ಟು ಅಚ್ಚುಕಟ್ಟಾಗಿ ನಡೆಸಬೇಕು. ಈ ನಿಟ್ಟಿನಲ್ಲಿ ನಮ್ಮ ಹೊಣೆಗಾರಿಕೆ ಹೆಚ್ಚಿಗಿದ್ದು, ಇದನ್ನರಿತು ಈ ದಿಸೆಯಲ್ಲಿ ಕಾರ್ಯನಿರ್ವಹಿಸಬೇಕು. ಎಸ್‌ಎಸ್‌ಎಲ್‌ಸಿ ಮಕ್ಕಳ ಜೀವನದ ಬಹುಮುಖ್ಯ ಘಟ್ಟವಾಗಿದ್ದು, ಅವರ ಭವಿಷ್ಯದ ದೃಷ್ಟಿಯಿಂದ ಕಲಿಕೆಗೆ ಪೂರಕವಾಗಿ ವಿಷಯ ಮನನ ಮಾಡಲು ಶ್ರಮಿಸಿ ಎಂದು ಅವರು ಹೇಳಿದರು.ಅದರಂತೆ, ಈ ಕಾರ್ಯಾಗಾರದಲ್ಲಿನ ಸಂಪನ್ಮೂಲ ವ್ಯಕ್ತಿಗಳು ಇಲ್ಲಿ ಪಾಲ್ಗೊಂಡು ತರಬೇತಿಯನ್ನು ಸದುಪಯೋಗಪಡಿಸಿಕೊಂಡು,ಇದೇ ವಾರದಲ್ಲಿ ತಾಲೂಕಾ ಮಟ್ಟದಲ್ಲಿ ಕಾರ್ಯಾಗಾರವನ್ನು ಆಯೋಜಿಸಿ, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎಲ್ಲರೂ ಕೈಜೋಡಿಸಿ ಎಂದು ತಿಳಿಸಿದರು.
ಕರ್ನಾಟಕ ಪ್ರೌಢÀಶಾಲಾ ಮಂಡಳಿ ಮತ್ತು ಮೌಲ್ಯ ನಿರ್ಣಯ ಮಂಡಳಿಯ ನಿರ್ದೇಶಕರಾದ ಎಚ್.ಎನ್.ಗೋಪಾಲಕೃಷ್ಣ ಅವರು ಮಾತನಾಡಿ, ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗಾಗಿ ಮಂಡಳಿ ವಿವಿಧ ಉಪಕ್ರಮಗಳನ್ನು ರೂಪಿಸಿದ್ದು, ಈಗಾಗಲೇ ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಕಾರ್ಯಾಗಾರ ಹಮ್ಮಿಕೊಂಡು, ಸಂಪನ್ಮೂಲ ವ್ಯಕ್ತಿಗಳಿಗಾಗಿ ಕಾರ್ಯಾಗಾರದಲ್ಲಿ ವಿವಿಧ ವಿಷಯಗಳ ಕುರಿತು ತರಬೇತಿ ನೀಡಲಾಗುತ್ತಿದೆ. ಪ್ರಸಕ್ತ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗಾಗಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕ್ರಿಯಾ ಯೋಜನೆಯನ್ವಯ ಕಾರ್ಯನಿರ್ವಹಿಸಿ, ಮಗುವಿನ ಕಲಿಕಾಸಕ್ತಿ ಗುರುತಿಸಿ, ವಿಷಯವಾರು ಬೋಧನಾ ಕ್ರಮಗಳನ್ನು ಅನುಸರಿಸುವ ಜವಾಬ್ದಾರಿ ಶಿಕ್ಷಕರ ಹಾಗೂ ಸಂಪನ್ಮೂಲ ವ್ಯಕ್ತಿಗಳದಾಗಿದೆ. ಮುಖ್ಯ ಶಿಕ್ಷಕರಿಗೆ ತರಬೇತಿಗಳನ್ನು ಆಯೋಜಿಸಬೇಕು. ಸಂಪನ್ಮೂಲ ಶಿಕ್ಷಕರು ಅತ್ಯಂತ ಪರಿಣಾಮಕಾರಿ ವಿಷಯ ತಿಳಿಸಿಕೊಟ್ಟು ಮಗುವಿನ ಶೈಕ್ಷಣಿಕ ಪ್ರಗತಿಗೆ ಕೈಜೋಡಿಸಿ, ಮುಂದಿನ ಮೂರು ತಿಂಗಳಲ್ಲಿ ಹೆಚ್ಚೆಚ್ಚು ಶೈಕ್ಷಣಿಕ ಚಟುವಟಿಕೆಗಳನ್ನು ಏರ್ಪಡಿಸಿ, ಮಕ್ಕಳ ಕಲಿಕಾ ಪ್ರಗತಿ ಹೆಚ್ಚಿಸಿ ಎಂದು ಹೇಳಿದರು.
ಧಾರವಾಡದ ಅಪರ ಆಯುಕ್ತರ ಕಚೇರಿಯ ನಿರ್ದೇಶಕರಾದ ಈಶ್ವರ ನಾಯಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೆಚ್ಚಳಕ್ಕಾಗಿ ಶ್ರಮಿಸುವುದು ಏಕೈಕ ಗುರಿಯಾಗಿದೆ. ಕಲಿಕಾಸಕ್ತಿ ಬೆಳೆಸಿ, ಮಕ್ಕಳ ಕಲಿಕೆಗೆ ಪ್ರೋತ್ಸ್ಸಾಹಿಸುವಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದೆ. ಪ್ರಯತ್ನ, ಪರಿಣಿತಿ ಪ್ರಗತಿಯೊಂದಿಗೆ ಶಿಕ್ಷಕರು ಪರಿಣಾಮಕಾರಿ ಬೋಧನೆ ಮಾಡಬೇಕು ಎಂದು ಹೇಳಿದರು.
ಸಭೆಯಲ್ಲಿ ಬಿಎಲ್‌ಡಿಇ ಸಂಸ್ಥೆಯ ಫ.ಗು.ಹಳಕಟ್ಟಿ ಇಂಜಿನೀಯರಿAಗ್ ಕಾಲೇಜಿನ ಪ್ರಾಂಶುಪಾಲರಾದ ಮಂಜುನಾಥ.ಪಿ, ಉಪ ಪ್ರಾಂಶುಪಾಲರಾದ ಲೀನಾ ರಾಘವ, ಬಾಗಲಕೋಟೆಯ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಅಜಿತ ಮನ್ನಿಕೇರಿ, ವಿಜಯಪುರದ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ವೀರಯ್ಯ ಸಾಲಿಮಠ, ಬಾಗಲಕೋಟೆಯ ಡಯಟ್ ಪ್ರಾಂಶುಪಾಲರಾದ ಸಲೀಂ ಪಾಶಾ, ವಿಜಯಪುರದ ಡಯಟ್ ಪ್ರಾಂಶುಪಾಲರಾದ ಉಮಾದೇವಿ ಸೊನ್ನದ ಸೇರಿದಂತೆ ಅವಳಿ ಜಿಲ್ಲೆಯ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಮನ್ವಯಾಧಿಕಾರಿಗಳು, ಸಂಪನ್ಮೂಲ ಅಧಿಕಾರಿಗಳು, ಶಿಕ್ಷಕರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026
    In ದಿನಪತ್ರಿಕೆ
  • ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ
    In (ರಾಜ್ಯ ) ಜಿಲ್ಲೆ
  • ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ
    In (ರಾಜ್ಯ ) ಜಿಲ್ಲೆ
  • ರೈತನ ಬೆಳೆ ಮಣ್ಣುಪಾಲು ಕಣ್ಣೀರು ಮಾತ್ರ ರೈತನ ಪಾಲು :ಕೋನಳ್ಳಿ
    In (ರಾಜ್ಯ ) ಜಿಲ್ಲೆ
  • ರಂಗಭೂಮಿ ಕಲಾವಿದ ರಾಜಕುಮಾರ್ ಗೆ ನಾಟಕ ಅಕಾಡೆಮಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಶ್ರಾವಣ ಸದ್ವಿಚಾರ
    In (ರಾಜ್ಯ ) ಜಿಲ್ಲೆ
  • ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ
    In (ರಾಜ್ಯ ) ಜಿಲ್ಲೆ
  • ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.