ವಿಜಯಪುರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಯ ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪ ಯೋಜನೆಯಡಿ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಹಾಗೂ ಕಂಪ್ಯೂಟರ್ ಜ್ಞಾನಹೊಂದಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ೧೨ ತಿಂಗಳ ಆಪ್ರೆಂಟಿಶಿಪ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ವಿಜಯಪುರ ಜಿಲ್ಲಾ ಕಚೇರಿಯಲ್ಲಿ ತಲಾ ಒಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಅಪ್ರೆಂಟಿಶಿಪ್ ತರಬೇತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ತರಬೇತಿಗೆ ಮೆರಿಟ್ ಹಾಗೂ ಸಂದರ್ಶನ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಧ್ಯಮ ಅಕಾಡೆಮಿ ಮೂಲಕ ತರಬೇತಿ ಭತ್ಯೆ ನೀಡಲಾಗುವುದು. ಅಪ್ರೆಂಟಿಶಿಪ್ ತರಬೇತಿಗೆ ಆಯ್ಕೆ ಬಯಸುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ದಿನಾಂಕ: ೨೪-೧೨-೨೦೨೫ರೊಳಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ ಆವರಣ, ಸ್ಟೇಶನ್ ರಸ್ತೆ, ವಿಜಯಪುರ ಕಚೇರಿಗೆ ಸಲ್ಲಿಸಬೇಕು.
ನಿಗದಿತ ಅರ್ಜಿ ನಮೂನೆ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯನ್ನು ಹಾಗೂ ಸಿನಿ ಚಾಲಕರಾದ ಸುರೇಶ ಅಂಬಿಗೇರ (ಮೊ:೮೬೬೦೦೬೮೪೦೬) ಸಂಪರ್ಕಿಸುವಂತೆ ಸಹಾಯಕ ನಿರ್ದೇಶಕರಾದ ಅಮರೇಶ ದೊಡಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
