ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವ ಸ್ಪರ್ಧೆಗಳನ್ನು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಡಿ.೧೮ ಹಾಗೂ ೧೯ರಂದು ನಡೆಯಲಿದ್ದು, ವಿವಿಧ ಕಲಾಪ್ರಕಾರಗಳಲ್ಲಿ ಬಾಲ ಪ್ರತಿಭೆ, ಕಿಶೋರ ಪ್ರತಿಭೆ ಹಾಗೂ ಯುವ ಪ್ರತಿಭೆಗಳ ಸ್ಪರ್ಧೆಗಳು ಬೆಳಗ್ಗೆ ೧೦ ಗಂಟೆಗೆ ಪ್ರಾರಂಭಗೊಳ್ಳಲಿವೆ.
ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಉದ್ಘಾಟಿಸುವರು. ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್ ಪಾಟೀಲ ಗೌರವ ಉಪಸ್ಥಿತರಿರಲಿದ್ದು, ಅಧ್ಯಕ್ಷತೆಯನ್ನು ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ ವಹಿಸಲಿದ್ದಾರೆ.
