Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವಾದಿ ಪ್ರಮಥರ ವಚನಗಳು ನಮಗೆ ದಾರಿದೀಪ :ರೆಬಿನಾಳ
(ರಾಜ್ಯ ) ಜಿಲ್ಲೆ

ಬಸವಾದಿ ಪ್ರಮಥರ ವಚನಗಳು ನಮಗೆ ದಾರಿದೀಪ :ರೆಬಿನಾಳ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬಸವಾದಿ ಪ್ರಮಥರ ವಚನಗಳು ನಮ್ಮೆಲ್ಲರ ಬದುಕಿಗೆ ದಾರಿದೀಪಗಳಾಗಿವೆ, ಬಸವ ಧರ್ಮ ವಿಶ್ವ ಧರ್ಮವಾಗಬೇಕು ಎಂದು
ಶ್ರೀ ಶಾಂತವೀರ ಪದವಿ ಪೂರ್ವ ಮಹಾವಿದ್ಯಾಲಯದ
ಪ್ರಾಚಾರ್ಯ ಪ್ರೊ.ಎಮ್.ಬಿ.ರೆಬಿನಾಳ ಕರೆ ನೀಡಿದರು.
ನಗರದ ಬಿ. ಎಲ್.ಡಿ.ಇ.ಸಂಸ್ಥೆಯ, ಜೆ.ಎಸ್. ಎಸ್.ಶಿಕ್ಷಣ ಮಹಾವಿದ್ಯಾಲಯದಲ್ಲಿ ದಿ. ಧರೆಪ್ಪ ಮತ್ತು ಬಸಮ್ಮ ಐಹೊಳ್ಳಿ ದಂಪತಿಗಳ ಸ್ಮಾರಣಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮ ಜರುಗಿತು. ಉಪನ್ಯಾಸ ನೀಡಿ ಮಾತನಾಡಿದ ಅವರು
ಸಾಂಸ್ಕೃತಿಕ ನಾಯಕ ಬಸವಣ್ಣನವರು ಎಂದೆಂದಿಗೂ ಪ್ರಸ್ತುತ. ದಾನ, ದಾಸೋಹ, ಧರ್ಮ, ಪೂಜೆ ಇವೆಲ್ಲ ತೋರಿಕೆ ಮತ್ತು ಡಾಂಬಿಕತೆಯಿಂದ ಕೂಡಿರಬಾರದು, ಅವರು ಕಾಯಕ-ದಾಸೋಹ-ಭಕ್ತಿ -ಸಹಕಾರ-ಸಮಾನತೆ-ಐಕ್ಯತೆ ಗಳ ಮಹತ್ವವನ್ನು ವಚನಸಾಹಿತ್ಯದ ಹಿನ್ನೆಲೆಯಲ್ಲಿ ತಿಳಿಸಿಕೊಟ್ಟರು. ನಾನು ಸಹ ಇದೇ ಮಹಾವಿದ್ಯಾಲಯದ ಹೆಮ್ಮೆಯ ವಿದ್ಯಾರ್ಥಿ ಎಂದು ಹೇಳಿಕೊಂಡರು .
ದತ್ತಿ ದಾಸೋಹಿಗಳಾದ ಫ. ಗು. ಹಳಕಟ್ಟಿ ಸಂಶೋಧನ ಕೇಂದ್ರ
ಸಂಯೋಜನಾಧಿಕಾರಿಗಳಾದ ಡಾ.ವಿ.ಡಿ. ಐಹೊಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ, ಹಿರಿಯರ ಸ್ಮರಣಾರ್ಥ ಇಂಥ ಕಾರ್ಯಕ್ರಮಗಳನ್ನು ಆಯೋಜಿಸುವುದು ಸಾರ್ಥಕ ವಾದ ಸಂಗತಿಯೆಂದು ತಿಳಿಸಿದರು. ಫ.ಗು.ಹಳಕಟ್ಟಿಯವರ ಮುಖ್ಯ ಆಶಯದಂತೆ ಪ್ರತಿಯೊಂದು ಕಾರ್ಯಕ್ರಮದ ಆರಂಭದಲ್ಲಿ ವಚನಗಾಯನ ಮಾಡಲು ತಿಳಿಸಿದರು.
ಕಾರ್ಯಕ್ರಮ ದಲ್ಲಿ ಡಾ.ವಿ.ಡಿ.ಐಹೊಳ್ಳಿ, ಪಟವರ್ಧನ ದಂಪತಿಗಳು ಮತ್ತು ಪ್ರೊ.ಎಮ್.ಬಿ.ರೆಭಿನಾಳ ಅವರಿಗೆ ಸನ್ಮಾನಿಸಲಾಯಿತು.
ಪಟವರ್ಧನ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ನಾನು ಇದೇ ಮಹಾವಿದ್ಯಾಲಯದ ವಿದ್ಯಾರ್ಥಿಯಾಗಿದ್ದು, ಜೆ. ಎಸ್. ಎಸ್. ಶಿಕ್ಷಣ ಮಹಾವಿದ್ಯಾಲಯದ ಸಂಸ್ಕಾರದಿಂದಲೇ ನಾನು ಹಲವಾರು ಸಾಮಾಜಿಕ ಸೇವೆಗಳನ್ನು ಮಾಡಲು ಸಾಧ್ಯವಾಯಿತು ಎಂದು ಹೇಳುತ್ತಾ ತಮ್ಮ ವಿದ್ಯಾರ್ಥಿ ಜೀವನವನ್ನು ಸ್ಮರಿಸಿಕೊಂಡರು.
ಕಾರ್ಯಕ್ರಮದ ಇನ್ನೋರ್ವ ಅತಿಥಿಗಳಾದ ಬಿ.ಎಲ್.ಡಿ.ಇ. ಸಂಸ್ಥೆ, ಎಸ್. ಎಸ್. ಆವರಣದ ಆಡಳಿತ ಅಧಿಕಾರಿಗಳಾದ ಪ್ರೊ.ಐ.ಎಸ್. ಕಾಳಪ್ಪನವರ ಅವರು ಮಾತನಾಡಿ ಹಿರಿಯರ ಮೌಲ್ಯಗಳ ಸ್ಮರಣೆಗಾಗಿ ನಡೆಸಿದ ಈ ದತ್ತಿ ಉಪನ್ಯಾಸ ಕಾರ್ಯಕ್ರಮವು ಬಹಳಷ್ಟು ಅರ್ಥಪೂರ್ಣವಾಗಿದೆ. ಈ ಮಹಾ ವಿದ್ಯಾಲಯದ ಪ್ರಾಚಾರ್ಯರಾದ ಡಾ. ಭಾರತಿ. ವಾಯ್. ಖಾಸನೀಸ ಮೇಡಮ್ಮವರೇ ದಾನ, ಧರ್ಮಕ್ಕೆ ಮಾದರಿಯಾಗಿದ್ದಾರೆ. ಇವರು ಎಸ್. ಎಸ್. ಆವರಣದ ವಿವಿಧ ಶಾಲೆಗಳಿಗೆ ದಾನ-ದತ್ತಿಗಳನ್ನು ನೀಡಿದ್ದಾರೆ, ಮಹಾವಿದ್ಯಾಲಯದ ಆವರಣದಲ್ಲಿ 60,000 ರೂ. ವೆಚ್ಚದಲ್ಲಿ ಸರಸ್ವತಿ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದಾರೆ, ಸಂಸ್ಥೆಯ ಸಮನ್ವಯ ಶಾಲೆಗೆ ಒಂದು ಲಕ್ಷ ರೂಪಾಯಿ ವೆಚ್ಚದ ಪೆನಲ್ ಬೋರ್ಡ್ ನ್ನು ಕಾಣಿಕೆಯಾಗಿ ನೀಡಿದ್ದಾರೆ, ಇನ್ನೂ ಇವರ ಗೊತ್ತಿರದ ದಾನ ಧರ್ಮಗಳು ಹಲವಾರು ಇವೆ. ಎಲೆಮರೆಯ ಕಾಯಿಯಂತೆ ಇವರಿದ್ದಾರೆ ಎಂದು ಶ್ಲಾಘಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯರಾದ ಡಾ. ಭಾರತಿ. ವಾಯ್. ಖಾಸನೀಸ ಅವರು ಮಾತನಾಡಿ ಸಮಾಜ ಮತ್ತು ಸಂಸ್ಥೆಗೆ ಮಾಡಿರುವ ದಾನ, ಧರ್ಮ, ಸೇವೆಗಳು ಅದು ದೇವರ ಸೇವೆ ಇದ್ದಹಾಗೆ, ಇದರಲ್ಲಿ ನನ್ನದೇನು ಇಲ್ಲ ಎಲ್ಲವೂ ಬಿ.ಎಲ್.ಡಿ.ಇ ಸಂಸ್ಥೆಯ ಕೊಡುಗೆ ಎಂದು ಸಂಸ್ಥೆಯ ಉಪಕಾರ ಸ್ಮರಿಸಿದರು.
ವಿದ್ಯಾರ್ಥಿನಿ ಪಲ್ಲವಿ ಹಿರೇಮಠ ಕಾರ್ಯಕ್ರಮವನ್ನು ನಿರೂಪಿಸಿದರು. ಐಶ್ವರ್ಯ ಜೋಷಿ ಪ್ರಾರ್ಥನೆ ಮಾಡಿದರು, ಪ್ರವೀಣ ಹೊಸಮನಿ ವಚನ ಗಾಯನ ಮಾಡಿದರು, ಐಶ್ವರ್ಯ ಉಮರಾಣಿ ಸ್ವಾಗತಿಸಿದರು. ಸಹ ಪ್ರಾಧ್ಯಾಪಕ ಡಾ. ಎಮ್.ಬಿ. ಕೋರಿ ವಂದಿಸಿದರು.
ಸಹಾಯಕ ಪ್ರಾಧ್ಯಾಪಕರುಗಳಾದ ಡಾ. ಜೆ. ಎಸ್. ಪಟ್ಟಣಶೆಟ್ಟಿ, ಡಾ. ಬಿ.ಎಸ್. ಹಿರೇಮಠ, ಎಸ್. ಎಸ್.ಪಾಟೀಲ, ಪಿ. ಡಿ. ಮುಲ್ತಾನಿ, ಡಾ. ಎಸ್. ಪಿ. ಶೇಗುಣಸಿ, ಪ್ರಶಿಕ್ಷಣಾರ್ಥಿಗಳು ಮತ್ತು ಐಹೊಳ್ಳಿ ಬಂಧುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026
    In ದಿನಪತ್ರಿಕೆ
  • ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ
    In (ರಾಜ್ಯ ) ಜಿಲ್ಲೆ
  • ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ
    In (ರಾಜ್ಯ ) ಜಿಲ್ಲೆ
  • ರೈತನ ಬೆಳೆ ಮಣ್ಣುಪಾಲು ಕಣ್ಣೀರು ಮಾತ್ರ ರೈತನ ಪಾಲು :ಕೋನಳ್ಳಿ
    In (ರಾಜ್ಯ ) ಜಿಲ್ಲೆ
  • ರಂಗಭೂಮಿ ಕಲಾವಿದ ರಾಜಕುಮಾರ್ ಗೆ ನಾಟಕ ಅಕಾಡೆಮಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಶ್ರಾವಣ ಸದ್ವಿಚಾರ
    In (ರಾಜ್ಯ ) ಜಿಲ್ಲೆ
  • ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ
    In (ರಾಜ್ಯ ) ಜಿಲ್ಲೆ
  • ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.